ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸ್ವಾತಂತ್ರ್ಯ ದಿನಾಚರಣೆ

Published on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಕೇಂದ್ರ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಂವಿಧಾನ ಸಂಪೂರ್ಣ ಪೀಠಿಕೆ ಪಠಿಸಿದರು. ನಿಗಮದ ನಿರ್ದೇಶಕರಾದ ಡಾ. ಕೆ. ನಂದಿನಿದೇವಿ (ಸಿಬ್ಬಂದಿ ಮತ್ತು ಜಾಗೃತ), ಇಬ್ರಾಹಿಂ ಮೈಗೂರ (ಮಾಹಿತಿ ಮತ್ತು ತಂತ್ರಜ್ಞಾನ), ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net