ಕರ್ನಾಟಕ ಲೋಕಾಯುಕ್ತ: ದೂರು ಸ್ವೀಕರಿಸುವ ಕಾರ್ಯಕ್ರಮ

Police
Published on

 ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗ ಅಧಿಕಾರಿಗಳಿಂದ ಏಪ್ರಿಲ್ 09 ರಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ, ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಅಗತ್ಯ ದಾಖಲಾತಿಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಅದೀಕ್ಷಕರಾದ ಉದೇಶ ಟಿ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net