

ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಮೇ 21 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರಣಾಂತರಗಳಿoದ ದೂರು ಸ್ವೀಕಾರ ಕಾರ್ಯಕ್ರಮವನ್ನು ಮೇ 23 ಕ್ಕೆ ಮುಂದೂಡಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಾರ್ವಜನಿಕ/ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಅಗತ್ಯ ದಾಖಲೆಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಉಮೇಶ್.ಟಿ. ಜೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.