ಕರ್ನಾಟಕ ಲೋಕಾಯುಕ್ತ: ದೂರು ಸ್ವೀಕರಿಸುವ ಕಾರ್ಯಕ್ರಮ

karnataka-lokayukta
Published on

ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಸರಗೂರು ತಾಲ್ಲೂಕಿನ ಮೈಸೂರು ಜಿಲ್ಲೆ ಡಾ.ಬಿ.ಆರ್ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಾರ್ವಜನಿಕ/ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಅಗತ್ಯ ದಾಖಲೆಗಳೊಡನೆ ಸಾರ್ವಜನಿಕರು ದೂರು ನೀಡಬಹುದು ಎಂದು ಲೋಕಾಯುಕ್ತ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net