ಕೈವಾರ ಯೋಗಿ ನಾರೇಯಣ ಮಠದ ಧರ್ಮಾಧಿಕಾರಿಗೆ ಡಾಕ್ಟರೇಟ್

MR.Jayaram
Published on

ಚಿಕ್ಕಬಳ್ಳಾಪುರ: ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ವಿದ್ಯಾಸಂಸ್ಥೆಗಳ ಅಧ್ಯಕ್ಷರು ಹಾಗೂ ಶ್ರೀ ಕ್ಷೇತ್ರ ಕೈವಾರ ಯೋಗಿ ನಾರೇಯಣ ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಮ್‌ಗೆ ಗೌರವ ಡಾಕ್ಟರೇಟ್ ಪದವಿ ಘೋಷಣೆಯಾಗಿದೆ.
ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ. ಜೂ.29 ರಂದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೈಗೊಂಡಿರುವ ಘಟಿಕೋತ್ಸವದಲ್ಲಿ ಪದವಿಯನ್ನು ಪ್ರದಾನ ಮಾಡಿ, ಸನ್ಮಾನಿಸಲಾಗುತ್ತದೆ ಎಂದು ವಿವಿಯ ಕುಲಪತಿ ಪ್ರೊ ಲಿಂಗರಾಜಗಾಂಧಿ ತಿಳಿಸಿದ್ದಾರೆ.
ದಿವಂಗತ ಉದ್ಯಮಿ ಎಂ.ಎಸ್.ರಾಮಯ್ಯರ ಪುತ್ರ ಎಂ.ಆರ್.ಜಯರಾಮ್. ಶೈಕ್ಷಣಿಕ, ಆಧ್ಯಾತ್ಮಿಕ, ಸಾಮಾಜಿಕ, ವ್ಯವಹಾರಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕದ ಕಾಶಿ ಎಂತಲೇ ಕರೆಸಿಕೊಂಡಿರುವ ಕೈವಾರ ಯೋಗಿ ನಾರೇಯಣ ಮಠದ ಧರ್ಮಾಧಿಕಾರಿಯಾಗಿದ್ದಾರೆ. ಇನ್ನು ಇವರ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಘೋಷಣೆಗೆ ಸಹೋದರ ಮತ್ತು ವಿಧಾನಪರಿಷತ್ ಸದಸ್ಯ ಎಂ.ಆರ್.ಸೀತರಾಮ್ ಸೇರಿದಂತೆ ಅವರ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net