ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಜಸ್ಟ್ ವಿಸಿಟಿಂಗ್ ಕಾರ್ಡ್: ಸಿಎಂ ಬೊಮ್ಮಾಯಿ ಲೇವಡಿ

Published on

ವಿಜಯವಾಣಿ ಸುದ್ದಿಜಾಲ ಮಂಗಳೂರು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಮತದಾರರನ್ನು ಸೆಳೆಯಲು ಬಿಡುಗಡೆ ಮಾಡಿರುವ ಗ್ಯಾರಂಟಿ ಕಾರ್ಡ್ ಅದು ಜಸ್ಟ್ ವಿಸಿಟಿಂಗ್ ಕಾರ್ಡು. ಅದಕ್ಕೆ  ಹೆಚ್ಚಿನ ಮಹತ್ವ ಇಲ್ಲ ಎಂದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ನಿಂದ ಬಿಜೆಪಿಗೆ ಯಾವುದೇ ಆತಂಕ ಇಲ್ಲ. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸೋಮಣ್ಣ ಅವರಿಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ. ಅವರು ವೈಯಕ್ತಿಕ ಕಾರಣದಿಂದ ನವದೆಹಲಿಗೆ ಹೋಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net