ಕಾಂಗ್ರೆಸ್ ಗ್ಯಾರಂಟಿ ಬಿಜೆಪಿಗೂ ಮಾದರಿ

Revanna
Published on

ಚಿತ್ರದುರ್ಗ: ರಾಜ್ಯದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ದೇಶದ ಹಲವೆಡೆಯ ಬಿಜೆಪಿ ರಾಜ್ಯ ಸರ್ಕಾರಗಳಿಗೂ ಮಾದರಿಯಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.

ಗ್ಯಾರಂಟಿ ಜಿಲ್ಲಾ ಸಮಿತಿ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಮಹಾರಾಷ್ಟ್ರ, ಉತ್ತರಪ್ರದೇಶ ಸೇರಿ ಬಿಜೆಪಿ ಸರ್ಕಾರವಿರುವ ವಿವಿಧೆಡೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿಕ್ಕಾಗಿ ಅಲ್ಲಿನ ಸಚಿವರು, ಸಿಎಂ ಕಚೇರಿಯ ಆಪ್ತ ಸಹಾಯಕರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದರು. ಇಲ್ಲಿ ಸಮರ್ಥವಾಗಿ ಮುನ್ನಡೆಸುತ್ತಿರುವ ಮಾಹಿತಿ ಪಡೆದಿದ್ದಾರೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಮಾದರಿಯಾಗಿದೆ ಎಂದರು.

ಭಾಷಣಕ್ಕೆ ಸೀಮಿತವಾದ ವಿಶ್ವಗುರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡು ಅನೇಕ ಬಿಜೆಪಿಗರು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಎಂಬುದಾಗಿ ಟೀಕಾ ಪ್ರಹಾರ ನಡೆಸಿದ್ದರು. ಆದರೆ, ಬಿಜೆಪಿಗರಾದ ಕರ್ನಾಟಕದ ರಾಜ್ಯಪಾಲರು ಮೊನ್ನೆಯಷ್ಟೇ ದೇಶದಲ್ಲೇ ವಿಶೇಷ ಯೋಜನೆ ಎಂದು ಕೊಂಡಾಡಿದರು. ಜನಪರ ಯೋಜನೆ ಕಾಂಗ್ರೆಸ್ ಅವಧಿಯಲ್ಲೇ ಹೆಚ್ಚು ಎಂದು ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net