ಕಾಂಗ್ರೆಸ್‌ನಿಂದ ಪ್ರತಿಭಟನೆ

20220722_113125.jpg
Published on

ರಾಯಚೂರು

ವಿಚಾರಣೆ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಇಡಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ರಾಯಚೂರಿನ ಅಂಬೇಡ್ಕರ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಿ ತನಿಖಾ ಸಂಸ್ಥೆಗಳಿಂದ ಕಿರುಕುಳ‌ ನೀಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ್ಯಾಷನಲ್ ಹೆರಾಲ್ಡ್‌ನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗದಿದ್ದರೂ ಇಡಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತದೆ ಎಂದು ದೂರಿದರು.

ಪ್ರತಿಭಟನೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಜನರು ಸಮಸ್ಯೆ ಎದುರಿಸುವಂತಾಗಿತ್ತು. ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net