ಕಾಡಪ್ಪನವರ ರಾಜ್ಯ ಮಟ್ಟಕ್ಕೆ ಆಯ್ಕೆ

New Kadappanavar new
Published on

ಹುಬ್ಬಳ್ಳಿ : ರಾಜ್ಯ ಸರ್ಕಾರದ ಆಶ್ರಯದಲ್ಲಿ ಹಿರಿಯ ನಾಗರಿಕರ ಕ್ರೀಡಾಕೂಟವು ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024ರ ಪ್ರಯುಕ್ತ ಧಾರವಾಡದ ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆಯಿತು.

ಈರಪ್ಪ ಕಾಡಪ್ಪನವರ 100 ಮೀಟರ್ ನಡಿಗೆಯಲ್ಲಿ ಬಂಗಾರದ ಪದಕ ಗೆದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸೆ. 23ರಂದು ನಡೆಯಲಿರುವ ತೀವ್ರ ನಡಿಗೆ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಹಿರಿಯ ನಾಗರಿಕರ ಸಂಘದ ಈರಪ್ಪ ಕಾಡಪ್ಪನವರ ಭಾಗವಹಿಸುವರು ಎಂದು ಸಂಘದ ರಾಜ್ಯಾಧ್ಯಕ್ಷ ಬಿ. ಎ. ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net