ಕಾಡಾನೆಗಳ ಹಾವಳಿಗೆ ಶಾಶ್ವತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಕಾಡಾನೆಗಳ ಹಾವಳಿಗೆ ಶಾಶ್ವತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
Published on

ಆಲೂರು: ಹಾಸನ ಜಿಲ್ಲೆಯ ಆಲೂರು_ಸಕಲೇಶಪುರದಲ್ಲಿ, ಅರಕಲಗೂಡು ಹಾಗೂ ಬೇಲೂರು ತಾಲೂಕುಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆಗಳ ಹಾವಳಿಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕ್ಷೇತ್ರದ ಶಾಸಕರುಗಳು  ಬೆಂಗಳೂರಿನ ವಿಧಾನಸೌಧದ ಹತ್ತಿರ ಇರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಮಲೆನಾಡು ಭಾಗವಾದ ಆಲೂರು, ಸಕಲೇಶಪುರ, ಬೇಲೂರು, ಅರಕಲಗೂಡು ಭಾಗದಲ್ಲಿ ಕಾಡಾನೆಯಿಂದ ಸಾಕಷ್ಟು ಸಾವು ನೋವು ಸೇರಿದಂತೆ ಆಸ್ತಿಪಾಸ್ತಿಗೆ ಹಾನಿ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರವನ್ನು ಒದಗಿಸಿಕೊಡ ಬೇಕು. ದಶಕಗಳಿಂದ ಸಾವು ನೋವುಗಳಿಂದ ಸಾಕಷ್ಟು ತೊಂದ ಅನುಭವಿಸುತ್ತಿರುವ ರೈತರ ಹಾಗೂ ಕೂಲಿ ಕಾರ್ಮಿಕರು  ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಜೊತೆ ಸರ್ಕಾರಿ ಉದ್ಯೋಗವನ್ನು ನೀಡಬೇಕು, ಒಳ ವೇಳೆ 3-4 ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲ್ಯ ಮಾತನಾಡಿ, ಈಗಾಗಲೇ ಮುಖ್ಯಮಂತ್ರಿಗಳು ಮಾತನಾಡಿದ್ದು, ನಾಳೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಲು ಸೂಚಿಸಿದ್ದಾರೆ. ಈ ಸಭೆಯಲ್ಲಿ ಶಾಶ್ವತ ಪರಿಹಾರದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್‌.ಕೆ. ಕುಮಾರಸ್ವಾಮಿ, ಅರಕಲಗೂಡು ತಾಲೂಕಿನ ಶಾಸಕರಾದ ಎ.ಟಿ.ರಾಮಸ್ವಾಮಿ, ಬೇಲೂರು ತಾಲೂಕಿನ ಶಾಸಕ ಕೆ.ಎಸ್‌. ಲಿಂಗೇಶ್‌, ಪ್ರಗತಿಪರ ರೈತ ಅತ್ತಿಹಳ್ಳಿ ದೇವರಾಜ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net