ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ

4sri-1 manavi
ಶೃಂಗೇರಿಯಲ್ಲಿ ವಲಯ ಅರಣ್ಯಾಧಿಕಾರಿ ಮಧುಕರ್ ಅವರಿಗೆ ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಚಂದ್ರಶೇಖರ್ ಗೊಳ್ಗೋಡು, ಸುರೇಶ್, ನಾಗೇಂದ್ರ ರಾವ್ ಇತರರಿದ್ದರು.
Published on

ಶೃಂಗೇರಿ: ಕಾಡು ಪ್ರಾಣಿಗಳ ಹಾವಳಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬುಧವಾರ ವಲಯ ಅರಣ್ಯಾಧಿಕಾರಿ ಮಧುಕರ್ ಅವರಿಗೆ ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ ಮಾತನಾಡಿ, ಕೊಪ್ಪ ತಾಲೂಕಿನ ಸೀತೂರಿನಲ್ಲಿ ಕೃಷಿಕನನ್ನು ಕಾಡಾನೆ ತುಳಿದು ಸಾಯಿಸಿರುವ ಘಟನೆ ನಾಗರೀಕ ಸಮಾಜ ಭಯಭೀತವಾಗುವಂತೆ ಮಾಡಿದೆ. ಅದರಲ್ಲೂ ರೈತಾಪಿ ವರ್ಗ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿರುವುದರಿಂದ ಕೃಷಿ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ. ಕಾಡುಪ್ರಾಣಿಗಳ ಹಾವಳಿ ತಪ್ಪಿಸಿ ಜನರು ಹಾಗೂ ರೈತರು ನೆಮ್ಮದಿಯಿಂದ ಬದುಕಲು ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಉಪಾಧ್ಯಕ್ಷ ನಾಗೇಶ್ ನಾಯ್ಕ ಮಾರನಕೊಡಿಗೆ, ಪದಾಧಿಕಾರಿಗಳಾದ ಅಂಗುರ್ಡಿ ದಿನೇಶ್, ಎಚ್.ಎಸ್.ಸುಬ್ರಹ್ಮಣ್ಯ, ಕಚಿಗೆ ನಾಗೇಂದ್ರರಾವ್, ಮಂಜುನಾಥ್ ನಾಯ್ಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net