ಕಾನೂನು ಕೋರ್ಸ್‌ಗಳ ಪ್ರವೇಶ

1494069646-students517
Published on

ಬೆಂಗಳೂರು
ಕಾನೂನು ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ(ಕ್ಲಾಟ್)ಗೆ ನೋಂದಾಯಿಸಿದ್ದ 75,183 ಅಭ್ಯರ್ಥಿಗಳ ಪೈಕಿ ಶೇ.78 ಅಭ್ಯರ್ಥಿಗಳು ಸೋಮವಾರ ಪರೀಕ್ಷೆ ಬರೆದಿದ್ದಾರೆ.
ದೇಶದಲ್ಲಿರುವ 22 ರಾಷ್ಟ್ರೀಯ ಕಾನೂನು ಶಾಲೆಗಳಲ್ಲಿ ಪ್ರವೇಶ ಪಡೆದುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ರಾಜ್ಯದಲ್ಲಿ 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಅ.5ರಂದು ಲಿತಾಂಶ ಪ್ರಕಟವಾಗಲಿದೆ. ಇಂದು ಬಂದ್ ಇದ್ದ ಕಾರಣ ಅಭ್ಯರ್ಥಿಗಳು ಸೂಕ್ತ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಪರೆದಾಡಿದ್ದಾರೆ.
ಪ್ರಶ್ನೆ ಪತ್ರಿಕೆ ತುಂಬಾ ಕ್ಲಿಷ್ಟವಾಗಿತ್ತು ಎಂದು ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರವನ್ನು 300ಕ್ಕೆ ಹೆಚ್ಚಳ ಮಾಡಿತ್ತು. ಈ ಬಾರಿ 200 ಅಂಕಗಳಿಗೆ ಪ್ರಶ್ನೆ ಪತ್ರಿಕೆಯನ್ನು 150 ಅಂಕಗಳಿಗೆ ಇಳಿಸಲಾಗಿತ್ತು. ಅಭ್ಯರ್ಥಿಗಳ ಕುಂದು ಕೊರತೆಯನ್ನು ಆಲಿಸಲು ನ್ಯಾಯಾಧೀಶ ರಾಜೇಂದ್ರ ಬಾಬು ಅವರ ಅಧ್ಯಕ್ಷೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಕ್ಲಾಟ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net