

2025/26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ 4 ವರ್ಷದ ಅವಧಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಗಳಾದ ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಯು ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ ಎರಡು ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು ಹಾಗೂ ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಣಿ ಮಾಡಿಸಿರಬೇಕು. ಅರ್ಹ ಮತ್ತು ಆಸಕ್ತಿಯುಳ್ಳ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಟ್ಟದ ಕಛೇರಿಗಳ ಸಂಕೀರ್ಣ ಕಟ್ಟಡ, ಕೊಠಡಿ ಸಂಖ್ಯೆ:202, 2ನೇ ಮಹಡಿ, ಸಿದ್ದಾರ್ಥನಗರ, ಮೈಸೂರುರವರಿಂದ ಪಡೆದು ನಿಗಧಿತ ನಮೂನೆಯಲ್ಲಿ ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲಾತಿಗಳೊಂದಿಗೆ ಜುಲೈ 31 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಳಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂ. ಸಂಖ್ಯೆ: 0821-2342917 ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.