ಜಿಲ್ಲೆಯಲ್ಲಿ ಕರೊನಾ ಸೋಂಕು ಹರಡುವ ಪ್ರಮಾಣ ಇಳಿಮುಖ

carona logo
Published on

ಕಾರವಾರ: ಜಿಲ್ಲೆಯಲ್ಲಿ ಕರೊನಾ ಇಳಿಮುಖವಾಗುತ್ತಿದೆ. ಬುಧವಾರ ಜಿಲ್ಲೆಯಲ್ಲಿ 2060 ಜನರ ಕರೊನಾ ಪರೀಕ್ಷೆ ಮಾಡಲಾಗಿದ್ದು, ಒಟ್ಟು 29 ಜನರಲ್ಲಿ ಮಾತ್ರ ಪಾಸಿಟಿವ್ ಕಾಣಿಸಿಕೊಂಡಿದೆ. ಪಾಸಿಟಿವ್ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ರ್ಯಾಪಿಡ್ ಆಂಟಿಜನ್ ಕಿಟ್ ಮೂಲಕ 500 ಹಾಗೂ ಆರ್​ಟಿ-ಪಿಸಿಆರ್ ಯಂತ್ರದ ಮೂಲಕ 100 ಸೇರಿ ಪ್ರತಿ ದಿನ 1500 ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಗುರಿ ನೀಡಿದೆ. ಆದರೆ, ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಗುರಿ ಮೀರಿ ಕರೊನಾ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕಿತರ ಪ್ರಮಾಣವೂ ಇಳಿಕೆಯಾಗುತ್ತಿರುವುದು ಸಮಾಧಾನದ ಸಂಗತಿ. ಈ ಕಾರ್ಯ ನಡೆಸುತ್ತಿರುವ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net