ಕಾರ್ತಿಕ ದೀಪೋತ್ಸವ ಸಂಭ್ರಮ

27bhr 1pooja
ಬಾಳೆಹೊನ್ನೂರು ಸಮೀಪದ ಅಕ್ಷರನಗರದ ಗುರಿಕಟ್ಟೆಬೈಲು ಚಾಮುಂಡೇಶ್ವರಿ ಅಮ್ಮನವರ ಕಾರ್ತಿಕ ದೀಪೋತ್ಸವ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.
Published on

ಬಾಳೆಹೊನ್ನೂರು: ಅಕ್ಷರನಗರದ ಗುರಿಕಟ್ಟೆಬೈಲು ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮಂಗಳವಾರ ರಾತ್ರಿ ಸಂಭ್ರಮದಿಂದ ನಡೆಯಿತು. ದೀಪೋತ್ಸವ ಅಂಗವಾಗಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಲ ಸಮರ್ಪಣೆ, ನೈವೇದ್ಯ, ಮಹಾಮಂಗಳಾರತಿ ನಡೆಯಿತು.

ಪೂಜಾ ವಿಧಾನಗಳ ಬಳಿಕ ಚಾಮುಂಡೇಶ್ವರಿ ಅಮ್ಮನವರ ಉತ್ಸವಮೂರ್ತಿಯನ್ನು ದೇವಾಲಯದ ಸುತ್ತಲೂ ವಿವಿಧ ವಾದ್ಯಗೋಷ್ಠಿಗಳೊಂದಿಗೆ ಪ್ರದಕ್ಷಿಣೆ ಹಾಕಿಸಲಾಯಿತು. ಬಳಿಕ ಸಾವಿರಾರು ಭಕ್ತರು ದೀಪಗಳನ್ನು ಹಚ್ಚಿ ದೀಪೋತ್ಸವದಲ್ಲಿ ಭಾಗಿಯಾದರು.

ಅರ್ಚಕ ಸುಬ್ರಹ್ಮಣ್ಯ ಭಟ್ ಪೂಜಾ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷ ಆರ್.ಡಿ.ಮಹೇಂದ್ರ, ಗೌರವಾಧ್ಯಕ್ಷ ಎಂ.ಎಸ್.ಅರುಣೇಶ್, ಪ್ರಮುಖರಾದ ಎಂ.ಎಸ್.ಚನ್ನಕೇಶವ ಗೌಡ, ತಿಪ್ಪೇಶ್, ವಿನೋದ್, ರವಿ ಗೌಡ, ಸಂದೀಪ್ ಶೆಟ್ಟಿ, ನಾಗರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net