ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ

1000345787
Published on

ಹಂಪಾಪುರ : ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ಹೊಮ್ಮರಗಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಹಾಗೂ ಕುಟುಂಬಸ್ಥರಿಗೆ ಭಾನುವಾರ ಆರೋಗ್ಯ ಉಚಿತ ತಪಾಸಣೆ ಶಿಬಿರ ಮತ್ತು ಟೂಲ್ ಕಿಟ್ ವಿತರಣೆ ಮಾಡಲಾಯಿತು.

ರಾಜ್ಯ ಶ್ರಮಿಕರ ರಕ್ಷಕ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಸಂಘದ ಸಹಯೋಗದಿಂದ ಹಮಿಕೊಂಡಿದ್ದ ಕಾರ್ಯಕ್ರಮಕ್ಕೆ ಕಾರ್ಮಿಕ ಇಲಾಖೆ ಎಚ್.ಡಿ.ಕೋಟೆ ವೃತ್ತದ ನೀರಿಕ್ಷಕಿ ಹರ್ಷಿತಾ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರಗಳನ್ನು ರಾಜ್ಯಾದಂತ ಆಯೋಜಿಸಲಾಗಿದೆ, ಮುನೆಚ್ಚರಿಕೆ ಕ್ರಮವಾಗಿ ಎಲ್ಲರೂ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಆರೋಗ್ಯ ತಪಾಸಣೆ ಶಿಬಿರದಲ್ಲಿ ದೈಹಿಕ ಪರೀಕ್ಷೆ, ಲಿವರ್, ಆಡಿಯೋ ಮೆಟ್ರಿ ಸ್ಕ್ರೀನ್ ಟೆಸ್ಟ್, ನೇತ್ರ ತಪಾಸಣೆ, ಸಿಬಿಸಿ, ಇಎಸ್‌ಆರ್ ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಕಿಡ್ನಿ ಕಾರ್ಯ ಪರೀಕ್ಷೆ, ರಕ್ತದಲ್ಲಿ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯಿಡ್ ಪರೀಕ್ಷೆ, ರಕ್ತದಲ್ಲಿ ಕಬ್ಬಿಣ, ಮೆಗ್ನೀಷಿಯಂ ಪ್ರಮಾಣ ಪರೀಕ್ಷೆ, ಜಿಜಿಟಿಪಿ ಪರೀಕ್ಷೆ, ಸಿಆರ್‌ಪಿ ಕ್ವಾಂಟಿಟೇಟಿವ್ ಪರೀಕ್ಷೆ, ಎಚ್‌ಐವಿ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ, ವಿಡಿಆರ್‌ಎಲ್, ರಕ್ತದ ಗುಂಪು ಪರೀಕ್ಷೆ, ಶ್ವಾಸಕೋಶದ ಕಾರ್ಯ ಪರೀಕ್ಷೆ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿ ಟೂಲ್ ಕಿಟ್ ವಿತರಣೆ ಮಾಡಲಾಯಿತು.

ಜಿಲ್ಲಾ ಅಧ್ಯಕ್ಷ ಎಚ್.ಜಿ. ಲೋಕೇಶ್, ಆರ್.ನಾಗರಾಜು, ತಾಲೂಕಿನ ಕುರುಬ ಸಮಾಜ ನೂತನ ಅಧ್ಯಕ್ಷ ಮಾಲೆಗೌಡ, ಹಿರಿಯ ಕಾರ್ಮಿಕ ನೀರಿಕ್ಷಕಿ ವೀಣಾ, ಭೀಮರಾವ್ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಕೆ.ಸತೀಶ್ ಕುಮಾರ್ , ವೆಂಕಟೇಶ್ವರ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗೋವಿಂದರಾಜು, ಉಪಾಧ್ಯಕ್ಷ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಮಮ್ಮ, ಜಿಲ್ಲಾ ಉಪಾಧ್ಯಕ್ಷ ಮನಾವೀಕರ್, ಸಿಂಡಿಕೇಟ್ ಸದಸ್ಯ ನಾಗರಾಜು, ಶಂಕರೇಶ್ವರ ಕೃಪಾ ಕಾರ್ಮಿಕರ ಸಂಘದ ಅಧ್ಯಕ್ಷರು ಚನ್ನನಾಯಕ, ಕಾರ್ಯದರ್ಶಿ ಚಂದ್ರಶೇಖರ್ ಇತರರು ಹಾಜರಿದ್ದರು.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net