ಕಾರ್ಯಕರ್ತರ ಕಷ್ಟಕ್ಕೆ ಸ್ಪಂದನೆ

22sor5 madu
ಸೊರಬ ಪಟ್ಟಣದ ಬಂಗಾರ ಧಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಧು ಬಂಗಾರಪ್ಪ ಉದ್ಘಾಟಿಸಿದರು ರವಿಕುಮಾರ್, ತಬಲಿ ಬಂಗಾರಪ್ಪ, ಎಚ್.ಗಣಪತಿ, ಕೆ.ಪಿ.ರುದ್ರಗೌಡ ಇತರರಿದ್ದರು.
Published on

ಸೊರಬ: ಕ್ಷೇತ್ರದ ಕಾರ್ಯಕರ್ತರ ಶ್ರಮದಿಂದ ಉನ್ನತ ಸ್ಥಾನದಲ್ಲಿದ್ದು ಅವರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುವ ಜತೆಗೆ ಅವರ ಕಷ್ಟಕ್ಕೆ ಸ್ಪಂದಿಸುವುದೆ ನನ್ನ ಮುಖ್ಯ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶನಿವಾರ ಪಟ್ಟಣದ ಬಂಗಾರ ಧಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಎಸ್.ಬಂಗಾರಪ್ಪ ತಮ್ಮ ರಾಜಕೀಯ ಪಡಸಾಲೆಯಲ್ಲಿ ಸಾಮಾನ್ಯ ವ್ಯಕ್ತಿಯನ್ನು ಬೆಳೆಸಿ ಶಾಸಕರನ್ನಾಗಿ ಮಾಡಿದರು. ಆದರೆ ಮಗನನ್ನು ಶಾಸಕನಾಗಿ ನೋಡುವ ಭಾಗ್ಯ ದೊರೆಯಲಿಲ್ಲ ಎನ್ನುವ ಕೊರಗು ಅವರಿಗಿತ್ತು. ಹಿರಿಯರ ಸಲಹೆ, ಸಹಕಾರ ಪಡೆದು ಅಭಿವೃದ್ಧಿ ಪರ ರಾಜಕಾರಣ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಭಾವುಕವಾಗಿ ನುಡಿದರು.

ಬಜೆಟ್‌ನಲ್ಲಿ ಬಹುತೇಕ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅನಮೋದನೆ ನೀಡಿದ್ದಾರೆ. 57 ಲಕ್ಷ ಮಕ್ಕಳಿಗೆ ಅಜೀಂ ಪ್ರೇಮ್ ಜಿ ೌಂಡೇಷನ್ ಸಹಯೋಗದೊಂದಿಗೆ 1,600 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರದ ಜತೆಗೆ ಮೊಟ್ಟೆ ವಿತರಿಸಲಾಗುತ್ತಿದೆ. ಇಲಾಖೆಯಲ್ಲಿ ಮಾಡಿರುವ ಮಹತ್ವದ ಬದಲಾವಣೆಗಳನ್ನು ವಿರೋಧ ಪಕ್ಷದವರು ಒಪ್ಪಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ ಮಾತನಾಡಿ, ಮಧು ಬಂಗಾರಪ್ಪ ಅವರು ಸಚಿವರಾಗಿ ಶಿಕ್ಷಣ ಇಲಾಖೆಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಜತೆಗೆ ಪಕ್ಷ ಸಂಘಟನೆಯಲ್ಲಿ ಕಾರ್ಯಕ್ರಮ ರೂಪಿಸಿ ಕಾರ್ಯಕರ್ತರಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಬೋವಿ ನಿಗಮದ ರಾಜಾಧ್ಯಕ್ಷ ರವಿಕುಮಾರ್, ಮುಖಂಡರಾದ ತಬಲಿ ಬಂಗಾರಪ್ಪ, ಎಚ್.ಗಣಪತಿ, ಕೆ.ಪಿ.ರುದ್ರಗೌಡ, ಸದಾನಂದ ಬಿಳಗಲಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಜಯಶೀಲಗೌಡ, ಯುವ ಘಟಕದ ಅಧ್ಯಕ್ಷ ಪ್ರವೀಣಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ವಿಶಾಲಾಕ್ಷಮ್ಮ, ಮುಖಂಡರಾದ ದಯಾನಂದಗೌಡ, ಶಿವಲಿಂಗೇಗೌಡ, ವಿರೇಶ್ ಕೊಟಗಿ, ರಶೀದ್ ಸಾಬ್, ಎಂ.ಡಿ ಶೇಖರ್, ಚಂದ್ರಣ್ಣ ಜರಮಲೆ, ನಾಗರಾಜ್ ಚಿಕ್ಕಸವಿ, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಮಂಜುನಾಥ್ ತಲಗಡ್ಡೆ, ಮಧುಗೌಡ, ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net