ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಕ್ಕೆ ಸಿಇಒ ತಾಕೀತು

ctd ceoooo
Published on

ಚಿತ್ರದುರ್ಗ: ನಿಗದಿತ ಕಾಲಾವಧಿಯೊಳಗೆ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪ್ರಗತಿ ಸಾಧಿಸುವಂತೆ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸ್ವಚ್ಛ ಭಾರತ್ ಮಿಷನ್(ಗ್ರಾ), ಜಲ ಜೀವನ್ ಮಿಷನ್, ಆಯುಷ್, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈ ರ್ಮಲ್ಯ ವಿಭಾಗ ಸೇರಿ ನಾನಾ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿರ್ದಿಷ್ಟ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.

ಜಿಪಂ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಸಿ.ಎನ್. ಗಾಯತ್ರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ಬಸನಗೌಡ ಮೇಟಿ ಪಾಟೀಲ, ಮುಖ್ಯಲೆಕ್ಕಾಧಿಕಾರಿ ಮಧು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್. ಬಣಕಾರ್, ಡಿಡಿಪಿಐ ಎಂ.ಆರ್. ಮಂಜುನಾಥ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಬಿ.ಸಿ. ನಾಗರಾಜ್, ವಿನಯ್, ಪ್ರಮೀಳಾ, ಶಶಿಧರ್, ಡಿಪಿಎಂ ಶಶಿಧರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net