ಕಿಕ್ಕೇರಿ ಗ್ರಾಪಂ ಅಧ್ಯಕ್ಷರಾಗಿ ಭಾರತಿ ಪ್ರಕಾಶ್ ಆಯ್ಕೆ

22kkr1(5-25 gp kik pr ele
Published on

ಕಿಕ್ಕೇರಿ: ಕಿಕ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾರತಿ ಪ್ರಕಾಶ್ ಗುರುವಾರ ಅವಿರೋಧ ಆಯ್ಕೆಯಾದರು.

ಕೆ.ಆರ್.ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಭಾರತಿ ಪ್ರಕಾಶ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಿಡಿಪಿಒ ಅರುಣ್‌ಕುಮಾರ್, ಸಹಚುನಾವಣಾಧಿಕಾರಿಯಾಗಿ ತಾಪಂ ವ್ಯವಸ್ಥಾಪಕ ಅನಿಲ್‌ಬಾಬು, ಪಿಡಿಒ ಚಲುವರಾಜು ಕಾರ್ಯನಿರ್ವಹಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಪ್ರಭಾಕರ್, ಗ್ರಾಪಂ ಉಪಾಧ್ಯಕ್ಷೆ ರೇಣುಕಮ್ಮ, ಮುಖಂಡರಾದ ಐಕನಹಳ್ಳಿ ಕೃಷ್ಣೇಗೌಡ, ಕಾಯಿ ಮಂಜೇಗೌಡ, ಶೇಖರ್, ರವಿ, ಸದಸ್ಯರಾದ ಎಸ್.ಕೆ.ಬಾಲಕೃಷ್ಣ, ಕೆ.ಆರ್.ರಾಜೇಶ್, ಕೆ.ಬಿ.ಚಂದ್ರಶೇಖರ್, ಕೆ.ಆರ್.ಕೃಷ್ಣ, ಕೆ.ಜಿ.ಪುಟ್ಟರಾಜು, ಸರಸ್ವತಿ ಗೋವಿಂದರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net