ಕುಟುಂಬ ವೈದ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ: ಐಎಂಎ ಆಗ್ರಹ

Published on

ಮಂಗಳೂರು: ಕುಟುಂಬ ವೈದ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಐಎಂಎ ಅಧ್ಯಕ್ಷ ಶಿವಕುಮಾರ್ ಬಿ ಲಕ್ಕೋಲ್ ಒತ್ತಾಯಿಸಿದರು.
ಶನಿವಾರ ಮಂಗಳೂರು ಐಎಂಎ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞ ವೈದ್ಯರ ಮತ್ತು ಕಾರ್ಪೊರೇಟ್ ಸಂಸ್ಕøತಿಯಿಂದಾಗಿ ವೈದ್ಯಕೀಯ ಸೇವೆ ಜನಸಾಮಾನ್ಯರ ಕೈಗೆಟುಕದಂತಾಗಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರನ್ನು ಅತಿ ನಿಕಟವಾಗಿ ಪರೀಕ್ಷಿಸಿ ಚಿಕಿತ್ಸೆ ನೀಡುವ ಕುಟುಂಬ ವೈದ್ಯ ಪದ್ಧತಿಗೆ ಒತ್ತು ನೀಡಬೇಕು ಎಂದು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಒಂದು ಲಕ್ಷ ನಕಲಿ ವೈದ್ಯರಿದ್ದಾರೆ ಎಂದು ಸರ್ಕಾರ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. ಇವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಒಂದು ವೈದ್ಯಪದ್ಧತಿಯಲ್ಲಿ ಪದವಿ ಪಡೆದಿದ್ದರೆ, ಅದೇ ಪದ್ಧತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಆದರೆ ಹಲವು ಮಂದಿ ವೈದ್ಯರು ತಾವು ಪದವಿ ಪಡೆಯದ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಸಮಸ್ಯೆಯ ಮೂಲ ಕಾರಣ ಎಂದು ವಿಶ್ಲೇಷಿಸಿದರು. ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net