ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದಂತೆ ಆಧ್ಯತೆ ಮೇರೆಗೆ ಪರಿಹರಿಸಿ / ಜಿಲ್ಲಾಧಿಕಾರಿ ಡಾ|| ಎಂ.ಆರ್. ರವಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಬೇಸಿಗೆ ಕಾಲ ಆಗಿರುವುದರಿಂದ ಕುಡಿಯುವ ನೀರಿಗೆ ಅಭಾವ ಉಂಟಾಗದAತೆ ಸಮಸ್ಯೆಯನ್ನು ಆಧ್ಯತೆ ಮೇರೆಗೆ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ಯರಗೊಳ ಹಾಗೂ ಕೆಸಿವ್ಯಾಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೋಲಾರ ನಗರ ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿರುವ ಯರಗೊಳ ಯೋಜನೆಯಡಿ ಈವರೆಗೆ ಮಧ್ಯರಾತ್ರಿಯವರೆಗೆ ಪಂಪಿAಗ್ ಮಾಡಲಾಗುತ್ತಿತ್ತು. ಆದರೆ ಇಂದಿನಿAದ ಸತತವಾಗಿ ಪಂಪಿAಗ್ ಮಾಡಲು ಉದ್ದೇಶಿಸಲಾಗಿದೆ. ಪ್ರಸ್ತುತ ಬೇಸಿಗೆ ಆರಂಭವಾಗಿರುವುದರಿAದ ಕುಡಿಯುವ ನೀರಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ಕುಡಿಯುವ ನೀರನ್ನು ಪೂರೈಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಸಂಬAಧಿತ ಅಧಿಕಾರಿಗಳಿಗೆ ಸೂಚಿಸಿದರು.

ಈವರೆಗೆ ೮ ರಿಂದ ೧೨ ಗಂಟೆಗಳ ಕಾಲ ನೀರು ಪಂಪಿAಗ್ ಮಾಡಲಾಗುತ್ತಿತ್ತು. ಇಂದಿನಿAದ ೧೪ ರಿಂದ ೧೮ ಗಂಟೆಗಳ ಕಾಲ ಪಂಪಿAಗ್ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಪಂಪಿAಗ್ ಮಾಡಲಾದ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಕೋಲಾರ ನಗರದಲ್ಲಿ ೧೧ ಒವರ್‌ಹೆಡ್ ಟ್ಯಾಂಕ್‌ಗಳಿAದ ೧೭ ವಾರ್ಡ್ಗಳಿಗೆ ೪ ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನು ಮುಂದೆ ಪ್ರತಿ ೨ ದಿನಗಳಿಗೊಮ್ಮೆ ೨ ಗಂಟೆಗಳAತೆ ಕುಡಿಯುವ ನೀರನ್ನು ಸರಬರಾಜು ಮಾಡಲು ಸೂಚಿಸಿದರು.

೧೩ ವಾರ್ಡ್ಗಳಲ್ಲಿ ಯರಗೊಳ ಜಲಾಶಯದ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ೯ ವಾರ್ಡ್ಗಳಲ್ಲಿ ಯರಗೊಳ ಹಾಗೂ ಕೊಳವೆ ಬಾವಿಗಳ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಪ್ರತಿನಿತ್ಯ ೩೫ ಟ್ರಿಪ್‌ಗಳಲ್ಲಿ ೭ ಟ್ಯಾಂಕರ್‌ಗಳಿAದ ನೀರು ಸರಬರಾಜು ಮಾಡಲಾಗುತ್ತಿದ್ದು, ಟ್ಯಾಂಕರ್‌ಗಳ ಬೇಡಿಕೆ ಹೆಚ್ಚಾಗಿರುವುದರಿಂದ ಹೆಚ್ಚುವರಿಯಾಗಿ ೪ ಹೊಸ ಟ್ಯಾಂಕರ್‌ಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಪೌರಾಯುಕ್ತ ಪ್ರಸಾದ್ ತಿಳಿಸಿದರು.

ಉಳಿದ ವಾರ್ಡ್ಗಳಿಗೆ ನಗರಸಭೆ ವ್ಯಾಪ್ತಿಯ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದAತೆ ನೋಡಿಕೊಳ್ಳಲಾಗುತ್ತಿದೆ. ಜೊತೆಗೆ ನೀರಿನ ಮಿತ ಬಳಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರಸಭೆಯ ಕಸ ಸಂಗ್ರಹಣೆ ವಾಹನಗಳಲ್ಲಿ ಶುಚಿತ್ವದ ಜೊತೆಗೆ ನೀರಿನ ಮಿತ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮಾಲೂರಿನ ೨೭ ವಾರ್ಡ್ಗಳಲ್ಲಿ ೫ ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ೧೫ ವಾರ್ಡ್ಗಳಲ್ಲಿ ಟ್ಯಾಂಕರ್ ಹಾಗೂ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು. ೫ ದಿನಗಳ ಬದಲಿಗೆ ೨ ಅಥವಾ ೩ ದಿನಗಳಿಗೆ ಒಮ್ಮೆ ನೀರು ಒದಗಿಸಲು ಯೋಜನೆಯನ್ನು ರೂಪಿಸಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕೆಸಿವ್ಯಾಲಿ ಯೋಜನೆಯ ನೀರು ೪ ಎಸ್.ಟಿ.ಪಿಗಳಲ್ಲಿ ೪೦೦ ಎಂ.ಎಲ್.ಡಿ ನೀರು ಸಂಗ್ರಹಣ ಸಾಮರ್ಥ್ಯವಿದ್ದು, ಪ್ರಸಕ್ತ ಸಾಲಿನಲ್ಲಿ ೨೭೬ ಕೆರೆಗಳನ್ನು ತುಂಬಲು ಯೋಜಿಸಲಾಗುತ್ತಿದೆ. ಒಟ್ಟಾರೆ ೫೦೦ ಕೆರೆಗಳಲ್ಲಿ ೪೧೫ ಕೆರೆಗಳನ್ನು ೯ ಪಂಪಿAಗ್ ಸ್ಟೇಷನ್ಸ್ ಮೂಲಕ ಹಾಗೂ ಪ್ರಾಕೃತಿಕ ರಿಡ್ಜ್ಗಳನ್ನು ಬಳಸಿ ತುಂಬಲಾಗುತ್ತಿದೆ ಎಂದು ಕೆ.ಸಿ.ವ್ಯಾಲಿ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಬೇತಮಂಗಲ ಕಾರ್ಯಪಾಲಕ ಇಂಜನಿಯರ್ ಚಂದ್ರಶೇಖರ್, ಯೋಜನಾ ನಿರ್ದೇಶಕಿ ಅಂಬಿಕಾ, ಬೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ಶೋಭ, ಕೋಲಾರ ನಗರಸಭೆ ಆಯುಕ್ತ ಪ್ರಸಾದ್, ಮಾಲೂರು ಹಾಗೂ ಬಂಗಾರಪೇಟೆ ಪೌರಾಯುಕ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೧೧ ಕೆ.ಎಲ್.ಆರ್. ೦೩ : ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಯರಗೋಳ್ ಮತ್ತು ಕೆಸಿವ್ಯಾಲಿ ಪ್ರಗತಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಎಂ.ಆರ್.ರವಿ. ಬೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ಶೋಭ, ಕೋಲಾರ ನಗರಸಭೆ ಆಯುಕ್ತ ಪ್ರಸಾದ್‌ಬಾಬು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net