ಕುಡಿವ ನೀರು ಪೂರೈಕೆಗೆ ಆಗ್ರಹ

CLK Yadalagatte 14
Published on

ಚಳ್ಳಕೆರೆ: ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಗ್ರಾಮಸ್ಥರು, ಆರು ತಿಂಗಳಿಂದ ಕುಡಿಯುವ ನೀರು ಪೂರೈಕೆ ಇಲ್ಲದೆ ಪರದಾಡುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಗ್ರಾಮಕ್ಕೆ ನೀರಿನ ಸಂಪರ್ಕದ ಪೈಪ್‌ಲೈನ್‌ಗಳು ಕೆಟ್ಟು ಆರು ತಿಂಗಳಾಗಿದೆ. ಅವುಗಳನ್ನು ಸರಿಪಡಿಸುವ ಕೆಲಸ ಆಗಿಲ್ಲ. ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ ಎಂದು ದೂರಿದ್ದಾರೆ.

ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ದುರಂತ ಗ್ರಾಮದಲ್ಲಿ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೇತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೂಡಲೇ ತಾಲೂಕು, ಜಿಲ್ಲಾ ಆಡಳಿತ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಗ್ರಾಮಸ್ಥರಾದ ಲಕ್ಷ್ಮೀದೇವಿ, ಶಾರದಮ್ಮ, ರಾಜಮ್ಮ, ಸಾವಿತ್ರಮ್ಮ, ಮಂಜಮ್ಮ, ರೇಣುಕಮ್ಮ, ಬೇಬಿಜಾನ್, ಸುಮಾ, ಚೈತ್ರಾ, ಮೌನಿಕಾ ಇತರರರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net