ಕುಮಾರಸ್ವಾಮಿಗೆ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ

11-ANP-P2 honour
ಆನಂದಪುರ ಸಮೀಪದ ಸಿದ್ದೇಶ್ವರ ಕಾಲನಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎ.ಡಿ.ಕುಮಾರಸ್ವಾಮಿಗೆ ರಾಜ್ಯಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Published on

ಆನಂದಪುರ: ಇಲ್ಲಿನ ಸಿದ್ದೇಶ್ವರ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯಶಿಕ್ಷಕ ಎ.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ನೆಲಮಂಗಲದ ಬಸವಸದನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ಸಂಘದ ವಾರ್ಷಿಕೋತ್ಸವ ಇದೇ ಸಂದರ್ಭ ನಡೆಸಲಾಯಿತು. ಸಮಾರಂಭದಲ್ಲಿ ನೆಲಮಂಗಲದ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಿವಗಂಗೆಯ ವೇಲಣಗವಿ ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಶ್ರೀ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎನ್.ಶ್ರೀನಿವಾಸ, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಶರಣಪ್ಪ ಗೌಡ, ಕೋಶಾಧ್ಯಕ್ಷ ಎಂ.ಆರ್.ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಹಾಲೇಶ್ ನವುಲೆ, ಸಂಸ್ಥಾಪಕ ಅಧ್ಯಕ್ಷ ಅಶೋಕ ಸಜ್ಜನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net