ಕೆ.ಆರ್.ನಗರ ವಿನಾಯಕ ಬಡಾವಣೆಯಲ್ಲಿ ಕಳ್ಳತನ

22 KRN-5
Published on

ಕೆ.ಆರ್.ನಗರ: ಪಟ್ಟಣದ ವಿನಾಯಕ ಬಡಾವಣೆಯಲ್ಲಿ ಬುಧವಾರ ರಾತ್ರಿ ಕಳ್ಳರು ಮನೆ ಬಾಗಿಲು ಮುರಿದು ಬೀರುವಿನಲ್ಲಿದ್ದ ಹಣ, ಚಿನ್ನದ ಒಡವೆ ಮತ್ತು ಬೆಳ್ಳಿ ಪದಾರ್ಥಗಳನ್ನು ಕದ್ದೊಯ್ದಿದ್ದಾರೆ.

ಜಯಲಕ್ಷ್ಮೀ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ. ಮನೆ ಬಾಗಿಲು ಮುರಿದು ಒಳನುಗ್ಗಿರುವ ಖದೀಮರು, ರೂಮಿನಲ್ಲಿದ್ದ ಬೀರುಗಳನ್ನು ಒಡೆದು 50 ಸಾವಿರ ನಗದು, 15 ಗ್ರಾಂ ಚಿನ್ನದ ಒಡವೆ, 138 ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು ಹಾಗೂ ಕಂಚಿನ ಸಾಮಾನುಗಳನ್ನು ಕದ್ದೊಯ್ದಿದ್ದಾರೆ.

ಗುರುವಾರ ಬೆಳಗ್ಗೆ ಮನೆಯವರು ಬಂದು ನೋಡಿದಾಗ ಕಳ್ಳತನವಾಗಿರುವುದು ಕಂಡು ಬಂದಿದೆ. ಈ ಬಗ್ಗೆ ಜಯಲಕ್ಷ್ಮೀ ಅವರ ಮಗ ಎ.ವಿಜಯಕುಮಾರ್ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net