ಕೆ-ಸೆಟ್ ಮತ್ತು ಯುಜಿಸಿ -ನೆಟ್ ಪರೀಕ್ಷೆಗಳ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

KSET-exam
Published on

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ವು ಜುಲೈ 16 ರಂದು ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ 45 ದಿನಗಳ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.

 ನ್ಯಾ. ಕೆ.ಜಿ. ಬಾಲಕೃಷ್ಣನ್ ವಿಚಾರಣಾ ಆಯೋಗದ ಸದಸ್ಯರು ಹಾಗೂ ಯುಜಿಸಿ ಸ್ಟೀರಿಂಗ್ ಸಮಿತಿ ಅಧ್ಯಕ್ಷರಾದ ಪ್ರೊ. ಸುಷ್ಮಾ ಯಾದವ್ ಅವರು ತರಬೇತಿ ಶಿಬಿರವನ್ನು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

 ಹಿರಿಯ ಐ.ಎ.ಎಸ್ ಅಧಿಕಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

 ಕುಲಸಚಿವ ಪ್ರೊ. ಎಸ್.ಕೆ ನವೀನ್‌ಕುಮಾರ್ ಉಪಸ್ಥಿತರಿರುವರು. ತರಬೇತಿಗೆ ಸೇರಬಯಸುವ ಆಸಕ್ತರು ಈಗಲೂ ಪ್ರವೇಶಾತಿ ಪಡೆಯಬಹುದಾಗಿದ್ದು, ದೂ.ಸಂ:0821-2515944/9964760090 ನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸಂಯೋಜನಾಧಿಕಾರಿಯಾದ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net