ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಅನುದಾನ

19ald 1 MOTTAMA
ಆಲ್ದೂರು ಬಸ್ ನಿಲ್ದಾಣ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಶಾಸಕಿ ನಯನಾ ಮೋಟಮ್ಮ ಗುದ್ದಲಿ ಪೂಜೆ ನೆರವೇರಿಸಿದರು. ಶ್ರೀದೇವಿ ಕುಮಾರಸ್ವಾಮಿ, ಡಿ.ಬಿ.ಅಶೋಕ್, ಕವೀಶ್ ಇತರರಿದ್ದರು.
Published on

ಆಲ್ದೂರು: ಕೆಂಪೇಗೌಡರು ನಾಡಿಗೆ ನೀಡಿರುವ ಕೊಡುಗೆ ಅಪಾರ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಒಕ್ಕಲಿಗ ಸಮಾಜದ ಮುಖಂಡರು ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರೂ ತಮ್ಮ ಸಮಾಜದ ಕಾರ್ಯದಲ್ಲಿ ರಾಜಕೀಯವನ್ನು ಬದಿಗಿಟ್ಟು ಒಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ನೀಡಲಾಗುವುದು. ಈ ವೃತ್ತಕ್ಕೆ ಹೈಮಾಸ್ಟ್ ಲೈಟ್ ಕೊಡುಗೆಯಾಗಿ ನೀಡುವುದಾಗಿ ಭರವಸೆ ನೀಡಿದರು.

ವಲಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಬಿ.ಅಶೋಕ್ ಮಾತನಾಡಿ, ಶಾಸಕರು ಪುತ್ಥಳಿ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿರುವುದು ಸಂತಸ ತಂದಿದೆ. ಸಮಾಜದವರ ಸಹಕಾರದಿಂದ ಸುಂದರ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದರು.

ವಲಯ ಒಕ್ಕಲಿಗ ಸಂಘದ ಗೌರವಾಧ್ಯಕ್ಷ ಎಚ್.ಎಸ್.ಕವೀಶ್ ಮಾತನಾಡಿ, ಬೆಂಗಳೂರು ನಗರವನ್ನು ದೇಶವೇ ತಿರುಗಿ ನೋಡುವಂತೆ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡಗೆ ಸಲ್ಲುತ್ತದೆ. ಇವರ ನೆನಪಿಗಾಗಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಕುಮಾರಸ್ವಾಮಿ, ಉಪಾಧ್ಯಕ್ಷ ಕೌಶಿಕ್, ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಸುರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಗ್ರಾಪಂ ಸದಸ್ಯ ಲಿಂಗೇಗೌಡ, ಜಿಲ್ಲಾ ಒಕ್ಕಲಿಗ ಸಂಘದ ನಿರ್ದೇಶಕಿ ಭವ್ಯಾ, ಕಾಫಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಸವಿತಾ ರಮೇಶ್, ಉಪಾಧ್ಯಕ್ಷೆ ಚಂಪಾ ಜಗದೀಶ್, ಸಂಪತ್ ಹೆಡದಾಳ್, ಕೃಷ್ಣೇಗೌಡ, ವಸಂತ್, ಈರೇಗೌಡ, ಅಂಬೇಡ್ಕರ್ ಹೋರಾಟ ವೇದಿಕೆ ಅಧ್ಯಕ್ಷ ನವರಾಜ್, ಗೌರವಾಧ್ಯಕ್ಷ ಹೊನ್ನಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದಾಬೀರ್, ಹೋಬಳಿ ಆಧ್ಯಕ್ಷ ಪೂರ್ಣೇಶ್, ಜೆಡಿಎಸ್ ಮುಖಂಡ ಡಿ.ಜೆ.ಸುರೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net