ಕೆಆರ್ ಆಸ್ಪತ್ರೆಯಲ್ಲಿ 15 ಹಾಸಿಗೆ

hospital
Published on

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿದ ಸಂದರ್ಭದಲ್ಲಿ ಅನಾಹುತವಾದಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಆಸ್ಪತ್ರೆಯ ಕಲ್ಲು ಕಟ್ಟಡದ ಸುಟ್ಟಗಾಯಗಳ ವಿಭಾಗದಲ್ಲಿ 15 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ದಿನದ 24 ಗಂಟೆಯೂ ವೈದ್ಯರು ಲಭ್ಯವಿರಲಿದ್ದಾರೆ. ಕಳೆದ 4 ವರ್ಷಗಳಿಂದ ಪಟಾಕಿ ಅನಾಹುತದ ಒಂದೆರಡು ಪ್ರಕರಣಗಳನ್ನು ಬಿಟ್ಟರೆ ಹೆಚ್ಚಿನ ಪ್ರಕರಣಗಳು ದಾಖಲಾಗಿಲ್ಲ. ಪಟಾಕಿ ಸಿಡಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿರುವುದರಿಂದ ಅನಾಹುತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಆದರೂ ಗಾಯಗೊಂಡವರಿಗಾಗಿ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಶೋಭಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net