ಕೆಯುಡಿಎ ವತಿಯಿಂದ ಎಲ್ಲದಕ್ಕೂ ಅನುಮತಿ ಕೊಟ್ಟರೆ ಮುಂದಿನ ಅನಾಹುತಗಳಿಗೆ ಹೊಣೆ ಯಾರು ?/ ಪ್ರತಿಯೊಂದಕ್ಕೂ ಸ್ಥಳ ಪರಿಶೀಲನೆ ಕಡ್ಡಾಯ / ಶಾಸಕ ಕೊತ್ತೂರು ಮಂಜುನಾಥ್ ಸೂಚನೆ.

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಬಡಾವಣೆಗಳ ನಿರ್ಮಾಣಕ್ಕೆ ಹಾಗೂ ಹೋಟೆಲ್, ಮಳಿಗೆ, ಮನೆ ನಿರ್ಮಾಣಕ್ಕೆ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ? ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು. ಇದಕ್ಕೆ ಸಂಬAಧಪಟ್ಟ ಇಲಾಖೆಯ ಕಡೆಯಿಂದ ಅನುಮತಿ ಪಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿ, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ. ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ. ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ. ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ. ಇಷ್ಟು ದಿನ ವ್ಯತ್ಯಾಸಗಳು ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು. ಕೋಲಾರವನ್ನು ಮುಂದಿನ ಐವತ್ತು ವರ್ಷದ ಭವಿಷ್ಯ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿAದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ. ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು. ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ, ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ. ಖಾಲಿ ಉಳಿದಿರುವ ೩೩೨ ನಿವೇಶನಗಳನ್ನು ಸರ್ಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನ ಪರಿಸ್ಥಿತಿ ಕೋಲಾರಕ್ಕೆ ಬರಬಾರದು :
ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ. ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ, ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅಂತಹ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು. ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು. ಸಂಬAಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆ ಅಭಿವೃದ್ಧಿಪಡಿಸಿ :
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ. ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ. ಸುಮಾರು ೩೦ ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ. ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಕಡತಗಳು ಗಣಕೀಕೃತ ಮಾಡಿ :
ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ, ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ, ಕೂಡಲೇ ಸಂಬAಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು. ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್.ಓ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

ಚಿತ್ರ ೩೧ ಕೆ.ಎಲ್.ಆರ್. ೦೭ : ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡುತ್ತಿರುವುದು. ಎಂ.ಎಲ್.ಸಿ. ಅನಿಲ್ ಕುಮಾರ್, ಕೆಯುಡಿಎ ಅಧ್ಯಕ್ಷ ಮೊಹಮ್ಮದ್ ಅನೀಫ್, ಎಡಿಸಿ ಮಂಗಳಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net