

2025/26ನೇ ಸಾಲಿಗೆ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಬoಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳ ನೇಕಾರರು ಹಾಗೂ ಕಾರ್ಮಿಕರಿಗೆ ವಾರ್ಷಿಕವಾಗಿ ರೂ.5,000/-ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ.
ಈ ಯೋಜನೆಯಡಿ 2024-25ನೇ ಸಾಲಿನಲ್ಲಿ ಈಗಾಗಲೇ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ ವೃತ್ತಿ ಬಿಟ್ಟಿರುವ, ಬೇರೆ ಕಡೆ ಸ್ಥಳಾಂತರಗೊoಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನ ಮಂತ್ರಿ ಭೀಮಾ ಯೋಜನೆಯಡಿ (ಪಿಎಂಜೆಜೆಬಿವೈ) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ (ಪಿಎಂಎಸ್‌ಬಿವೈ) ನೊಂದಣಿಯಾಗಿರುವ ಕೈಮಗ್ಗ ನೇಕಾರರು ಮಾತ್ರ ಸ್ಥಳೀಯ ಕೈಮಗ್ಗ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಕಛೇರಿಯ ಆವರಣದಲ್ಲಿರುವ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಚಾಮರಾಜೇಂದ್ರ ತಾಂತ್ರಿಕ ವಿದ್ಯಾ ಸಂಸ್ಥೆ,(ಸಿಟಿಐ ಕಟ್ಟಡ), ಸಯ್ಯಾಜಿ ರಾವ್ ರಸ್ತೆ, ಮೈಸೂರು-01, ವಿವರಗಳನ್ನು ಸಲ್ಲಿಸಬೇಕು.
ಕಳೆದ ಸಾಲಿನಲ್ಲಿ ನೊಂದಣಿಯಾಗದೇ ಇರುವ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಹೊಸದಾಗಿ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನೇಕಾರರ ಗುರುತಿನ ಚೀಟಿ ಮತ್ತು ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಫೋಟೋ ಪ್ರತಿ ವಿವರಗಳೊಂದಿಗೆ ಆಗಸ್ಟ್ 15 ರೊಳಗೆ ಹೊಸ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ಕಛೇರಿಯ ಆವರಣದಲ್ಲಿರುವ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಚಾಮರಾಜೇಂದ್ರ ತಾಂತ್ರಿಕ ವಿದ್ಯಾ ಸಂಸ್ಥೆ,(ಸಿಟಿಐ ಕಟ್ಟಡ), ಸಯ್ಯಾಜಿ ರಾವ್ ರಸ್ತೆ, ಮೈಸೂರು -01 ಇಲ್ಲಿಗೆಕಛೇರಿಯ ಕೆಲಸದ ಸಮಯದಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ಕಛೇರಿ ದೂರವಾಣಿ ಸಂಖ್ಯೆ:0821-2441353 ನ್ನು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.