ಕೈಲ್ ಮುಹೂರ್ತಕ್ಕೆ ಗಣ್ಯರ ಶುಭಾಶಯ

3adarshkdga5
Published on


ಮಡಿಕೇರಿ : ಕೊಡಗಿನ ಕೈಲ್ ಪೋಳ್ದ್ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ಶುಭ ಕೋರಿದ್ದಾರೆ.
ಸಮಸ್ತ ಕೊಡವ ಬಾಂಧವರಿಗೆ ಕೈಲ್ ಪೋಳ್ದ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊಡಗಿನ ರೈತಾಪಿ ವರ್ಗ ತಾನು ದಿನನಿತ್ಯ ಬಳಸುವ ಆಯುಧಗಳಿಗೆ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತಾ ಭಾವವನ್ನು ಸಂಭ್ರಮ, ಸಡಗರದಿಂದ ಆಚರಿಸುವ ಹಬ್ಬ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಶುಭ ಕೋರಿದ್ದು, ನಾಡಿನ ಸಮಸ್ತ ಜನತೆಗೆ ಕೈಲ್ ಪೋಳ್ದ್ ಹಬ್ಬದ ಶುಭಾಶಯಗಳು. ಈ ಹಬ್ಬವು ಎಲ್ಲರ ಬಾಳಲ್ಲಿ ಸುಖ ಹಾಗೂ ಸಮೃದ್ಧಿ ತರಲಿ ಎಂದು ಪ್ರಾರ್ಥಿಸುತ್ತೇವೆ ಎಂಬುವುದಾಗಿ ಟ್ವೀಟ್ ಮಾಡಿದ್ದಾರೆ.

ಸಚಿವ ಡಾ.ಸುಧಾಕರ್ ಕೂಡ ಆಯುಧ ಪೂಜೆಯ ಚಿತ್ರವನ್ನು ಟ್ವೀಟ್ ಮಾಡುವುದರೊಂದಿಗೆ ಕೊಡಗಿನ ಕೈಲ್ ಮುಹೂರ್ತ ಹಬ್ಬಕ್ಕೆ ಶುಭ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net