ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Crime Logo
Published on

ಚಿತ್ರದುರ್ಗ: ಹೊರವಲಯದ ನಾಮಕಲ್ ಗ್ಯಾರೇಜ್ ಸಮೀಪ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಶವವೊಂದು ಪತ್ತೆಯಾಗಿದ್ದು, ಮೃತರನ್ನು ಕೆಳಗೋಟೆ ವಾಸಿ ನಾಗರಾಜ್ (48) ಎಂದು ಗುರುತಿಸಲಾಗಿದೆ.

ಚಳ್ಳಕೆರೆಯ ತಾಲೂಕು ಕಚೇರಿಯಲ್ಲಿ ಗ್ರಾಮ ಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅನಾರೋಗ್ಯ ಸಮಸ್ಯೆ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದಾಗಿ ಪೊಲೀಸರ ತನಿಖೆ ವೇಳೆ ಮೇಲ್ನೋಟಕ್ಕೆ ತಿಳಿದುಬಂದಿದೆ.

ಜ. 5ರಂದು ನಾಪತ್ತೆ ಆಗಿದ್ದಾರೆ ಎಂಬುದಾಗಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶವ ಅರ್ಧ ಕೊಳೆತ ಸ್ಥಿತಿಯಲ್ಲಿದ್ದ ಕಾರಣ ವಾರದ ಹಿಂದೆಯೇ ಮೃತಪಟ್ಟಿರಬಹುದು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರ ತನಿಖಾ ತಂಡ ತಿಳಿಸಿದೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಗರಾಜ್ ಪತ್ನಿಯ ತಮ್ಮ ದೂರು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net