ಕೋಟ್ಪಾ ಪರಿಣಾಮಕಾರಿ ಜಾರಿಗೆ ಸಹಕರಿಸಿ

Published on

ಹುಣಸೂರು: ಪರಿಣಾಮಕಾರಿಯಾಗಿ ಕೋಟ್ಪಾ ಜಾರಿಗೆ ತರಲು ಎಲ್ಲ ಇಲಾಖೆಗಳು ಸಹಕಾರ ನೀಡಬೇಕೆಂದು ಎಂದು ಗ್ರೇಡ್ 2 ತಹಸೀಲ್ದಾರ್ ನರಸಿಂಹಯ್ಯ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಮಟ್ಟದಿಂದ ನಗರ ಪ್ರದೇಶದವರೆಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇದರಲ್ಲಿ ಶಿಕ್ಷಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಪಾತ್ರ ಬಹುಮುಖ್ಯವಾಗಿದೆ. ಶಾಲಾ-ಕಾಲೇಜುಗಳ ಆವರಣವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸಿ ನಾಮಫಲಕ ಅಳವಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ನಿಯಮವನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.ಎಲ್ಲ ಇಲಾಖೆಗಳ ಸಹಕಾರವಿದ್ದರೆ ಮಾತ್ರ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಜಾರಿ ಸಾಧ್ಯವಿದೆ ಎಂದರು.

ಸಭೆಯಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಾಜೇಶ್ವರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ, ಪಿಎಸ್‌ಐ ಜಮೀರ್ ಅಹಮದ್, ತಾಲೂಕು ಪಂಚಾಯಿತಿ ಕಚೇರಿ ವ್ಯವಸ್ಥಾಪಕ ಹೇಮಂತ್ ಕುಮಾರ್, ನಗರಸಭೆಯ ಆರೋಗ್ಯ ನಿರೀಕ್ಷಕ ಸತೀಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net