ಕೋಲಾರ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿದ್ದಾರೆ / ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ಪಂದನೆ ಇಲ್ಲ / ಇಂಚರ ಗೋವಿಂದರಾಜು

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಕೋಲಾರ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿದ್ದಾರೆ. ಅವಧಿ ಪೂರ್ವಕ್ಕೂ ಮುನ್ನ ಹುಟ್ಟುವ ಮಕ್ಕಳು, ರಕ್ತದ ಕೊರತೆ ಹೀಗೆ ಹಲವು ಕಆರಣಗಳಿಂದ ಜನಿಸಿರುವ ೧೦೦೦ ಕ್ಕೂ ಹೆಚ್ಚು ಮಕ್ಕಳು ಅಪೌಷ್ಠಿಕತೆಯಿಂದ ಬಳಲುವಂತಾಗಿದೆ ಎಂದು ವಿಧಾನಪರಿಷತ್ತಿನ ಅಧಿವೇಶನದಲ್ಲಿ ಸದಸ್ಯ ಗೋವಿಂದರಾಜು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಚಿವರ ಗಮನಕ್ಕೆ ತಂದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ-ಅAಶಗಳ ಪ್ರಕಾರ ೨೦೨೪ ರ ಏಪ್ರಿಲ್‌ವರೆಗೆ ಜಿಲ್ಲೆಯಲ್ಲಿ ಒಟ್ಟು ೮೫,೫೨೨ ಮಕ್ಕಳನ್ನು ತೂಕ ಮಾಡಲಾಗಿದ್ದು, ೯೨ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ. ೨೦೨೩ರ ಡಿಸೆಂಬರ್ ಅಂತ್ಯದವರೆಗೆ ಒಟ್ಟು ೮೪,೬೭೧ ಮಕ್ಕಳನ್ನು ತೂಕ ಮಾಡಲಾಗಿದೆ. ಅವರಲ್ಲಿ ಒಟ್ಟು ೧,೩೩೩ ಮಕ್ಕಳಲ್ಲಿ ಅಪೌಷ್ಠಿಕತೆಯಿರುವುದು ಪತ್ತೆಯಾಗಿದೆ. ಒಟ್ಟು ಮಕ್ಕಳ ಪ್ರಮಾಣಕ್ಕೆ ಹೋಲಿಸಿದರೆ ಶೇ೧.೫೭ ಮಕ್ಕಳಲ್ಲಿ ಪೌಷ್ಠಿಕಾಂಶದ ಕೊರತೆಯಿದೆ. ಈ ಬಾರಿ ಶೇ.೦.೧೧ ಪ್ರಮಾಣದಲ್ಲಿದ್ದು, ಇನ್ನೂ ಏರಿಕೆಯಾಗುವ ಆತಂಕ ಕಾಡುತ್ತಿರುವುದಾಗಿ ಸದನದಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು ಸಮಗ್ರ ಶಿಶು ಅಭಿವೃದ್ದಿ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ೧೯೭೫ ಅಕ್ಟೋಬರ್ ೨ ರಂದು ಪ್ರಾಯೋಗಿಕವಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನಲ್ಲಿ ೧೦೦ ಅಂಗನವಾಡಿ ಕೇಂದ್ರಗಳೊAದಿಗೆ ಸಮಗ್ರ ಶಿಶು ಅಭಿವೃದ್ಧಿಯೋಜನೆಯನ್ನು ಪ್ರಾರಂಭಿಸಲಾಯಿತು. ಈಗ ರಾಜ್ಯದ ಎಲ್ಲಾ ತಾಲ್ಲೂಕುಗಳಿಗೂ ವಿಸ್ತರಿಸಲಾಗಿದೆ. ೬ ವರ್ಷದ ಒಳಗಿನ ಮಕ್ಕಳ, ಗರ್ಭಿಣಿ, ಬಾಣಂತಿ ಮತ್ತು ಕಿಶೋರಿಯರ ಸರ್ವತೋಮುಖ ಅಭಿವೃದ್ಧಿಯು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ರಾಜ್ಯದಲ್ಲಿ ೨೦೪ ಯೋಜನೆಗಳಡಿ ಸಮಗ್ರ ಶಿಶು ಅಭಿವೃದ್ದಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ೬೯೯೧೯ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಠಿಕತೆಯನ್ನು ಹೆಚ್ಚಿಸಲು ಮಾತೃಪೂರ್ಣ ಯೋಜನೆಯಡಿ ಸರ್ಕಾರವು ಕೆಲವೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ೨೦೨೪-೨೫ ನೇ ಸಾಲಿನಲ್ಲಿ ಮಾತೃಪೂರ್ಣ ಯೋಜನೆಯಡಿ ಪ್ರಯೋಜನ ಪಡೆದಿರುವವರ ಸಂಖ್ಯೆ ೯೪೮೩೩೮ ಆಗಿದೆ. ಈ ಯೋಜನೆಯ ಉದ್ದೇಶ ಕಡಿಮೆ ತೂಕದ ಮಕ್ಕಳ ಜನನ ಹಾಗೂ ಮಕ್ಕಳಲ್ಲಿನ ಅಪೌಷ್ಠಿಕತೆ ಪ್ರಮಾಣ ಕಡಿಮೆ ಮಾಡುವುದಾಗಿ ತಿಳಿಸಿದರು.

ಕೋಲಾರ ಜಿಲ್ಲೆ ಹಾಗೂ ರಾಜ್ಯಾದ್ಯಂತ ಗರ್ಭೀಣಿಯರಲ್ಲಿನ ಅಪೌಷ್ಠಿಕತೆ, ಅವಧಿ ಪೂರ್ವ ಜನಿಸಿದ ಮಕ್ಕಳಲ್ಲಿ ರಕ್ತದಕೊರತೆಯ ಸಮಸ್ಯೆಯನ್ನು ನಿಭಾಯಿಸಲು ಆರೋಗ್ಯ ಮತು ್ತಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಪಾಸಣೆ ಹಾಗೂ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಕ್ರಮವಹಿಸುವುದಾಗಿ ಸಚಿವರು ಉತ್ತರ ನೀಡಿದರು.

ಇದಕ್ಕೆ ತೃಪ್ತರಾಗದ ಸದಸ್ಯ ಗೋವಿಂದರಾಜು ಮರು ಪ್ರಶ್ನೆಯನ್ನು ಹಾಕಿ, ಬಾಲ್ಯವಿವಾಹ, ಆರ್ಥಿಕತೆ, ಬಡತನದಿಂದಾಗಿ ಜಿಲ್ಲೆಯಲ್ಲಿ ಅಪೌಷ್ಠಿಕತೆ ಸಮಸ್ಯೆ ಮುಂದುವರಿದಿದೆ. ಇದರ ಬಗ್ಗೆ ಯಾವೊಬ್ಬ ಅಧಿಕಾರಿಗಳು ಗಮನಹರಿಸಿಲ್ಲ. ಅಪೌಷ್ಠಿಕತೆ ನಿರ್ಮೂಲನೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತೃವಂದನ, ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಆದರೆ ಮಕ್ಕಳ ದೈಹಿಕ ಬೆಳವಣಿಗೆ ಮಾತ್ರ ನಿರೀಕ್ಷಿತ ಮಟ್ಟದ ಸುಧಾರಣೆ ಕಾಣುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಅಗತ್ಯ ಪೋಷಕಾಂಶ ನೀಡುವ ಉದ್ದೇಶದಿಂದ ಮೊಟ್ಟೆ. ನೆನೆಸಿದ ಹೆಸರು ಕಾಳು, ರೈಸ್‌ಬಾತ್, ಅನ್ನ ಸಾರು ಸೇರಿ ಇತರ ಆಹಾರ ಪದಾರ್ಥಗಳನ್ನು ಸರ್ಕಾರ ವಿತರಿಸುತ್ತಿತ್ತು. ಆದರೆ ಈ ಎಲ್ಲ ಆಹಾರ ಪಟ್ಟಿಯನ್ನು ಕೈಬಿಟ್ಟು, ಕಿಚಡಿ ಮಾತ್ರ ನೀಡಲಾಗುತ್ತಿದೆ. ಇದರಲ್ಲಿ ಯಾವ ಪೌಷ್ಠಿಕಾಂಶ ಇದೆ? ಕಳೆದ ಜನವರಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಹಾಲು ಸೇರಿ ಯಾವುದೇ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿಲ್ಲ. ಇದರಿಂದ ಮಕ್ಕಳು ಖಾಲಿ ಹೊಟ್ಟೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ದಿನವಿಡೀ ಕಾಲ ಕಳೆದು ಊಟಕ್ಕೆ ಮನೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಪೌಷ್ಠಿಕಾಂಶವುಳ್ಳ ಮೊಟ್ಟೆ ಹಾಗೂ ಹಾಲು ನೀಡುತ್ತಿಲ್ಲ. ನಿಮ್ಮ ಅಧಿಕಾರಿಗಳೇ ಹೇಳಿದ್ದಾರೆ, ಆಹಾರ ವಿತರಣೆಯಲ್ಲಿ ಸಮಸ್ಯೆಯಾದ ಕಾರಣ ಹಾಗೂ ಆಹಾರದ ಮೆನ್ಯೂ ಪದ್ದತಿ ಬದಲಾಗಿರುವುದರಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳ ಪೂರೈಕೆಗೆ ಸಮಸ್ಯೆಯಾಗಿದೆ ಎಂಬುದಾಗಿ ಉತ್ತರಿಸುತ್ತಾರೆ.

ಕಳೆದ ಜೂನ್ ೧೫ ರಂದು ನಿವೃತ್ತ ನ್ಯಾ.ಎ.ಎನ್. ವೇಣುಗೋಪಾಲಗೌಡ ನೇತೃತ್ವದ ಸಮಿತಿ ಬೆಂಗಳೂರಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ನಿವೃತ್ತ ನ್ಯಾಯಾಧೀಶರು ಹೇಳಿರುವಂತೆ, ರಾಜ್ಯದಲ್ಲಿನ ಬಹುತೇಕ ಅಂಗನವಾಡಿ ಕೇಂದ್ರಗಳ ಸ್ಥಿತಿ ಶೋಚನೀಯವಾಗಿದೆ. ಕಳಪೆ ದರ್ಜೆ ಆಹಾರ, ಕಟ್ಟಡ, ಸ್ಚಚ್ಛತೆ ಇಲ್ಲದ ಶೌಚಾಲಯ, ಆಹಾರವನ್ನು ಸ್ವತ: ಸಮಿತಿಯ ಸದಸ್ಯರು ತಿಂದು ಪರಿಶೀಲಿಸಿದಾಗ ಅದು ತೀರಾ ಕಳಪೆಯಾಗಿರುವುದು ಕಂಡು ಬಂದಿದೆ. ಬಾಯಲ್ಲಿಡಲು ಸಾಧ್ಯವಿರಲಿಲ್ಲ, ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದು ಸದಸನದ ಮುಂದೆ ತಂದರು.

ಮಕ್ಕಳಿಗೆ ಹಾಗೂ ಗರ್ಭೀಣಿ ಹೆಂಗಸರಿಗೆ ಪೌಷ್ಠಿಕಾಂಶವುಳ್ಳ ಆಹಾರ ಪದಾರ್ಥಗಳನ್ನು ನೀಡಲು ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಇರುವ ತೊಂದರೆಯಾದರೂ ಏನೂ? ಹಾಗಿದ್ದರೇ ಇಲಾಖೆಗೆ ಬಿಡುಗಡೆಯಾಗುತ್ತಿರುವ ಅನುದಾನ ಯಾರಿಗೆ ಹೋಗುತ್ತಿದೆ ಎಂಬುದನ್ನು ಸಚಿವರು ತಿಳಿಸಬೇಕಿದೆ. ತಾವು ಸಚಿವರಾಗಿ ಒಂದು ವರ್ಷ ಕಳೆದಿದೆ, ಬೆಂಗಳೂರಿನಿAದ ಕೇವಲ ೭೦ ಕಿ.ಮೀ ಅಂತರದಲ್ಲಿರುವ ಕೋಲಾರ ಜಿಲ್ಲೆಗೆ ಪ್ರವಾಸ ಕೈಗೊಂಡಿಲ್ಲ, ತಾವು ಜಿಲ್ಲೆಗೆ ಬಂದು ಪೂರ್ತಿ ಒಂದು ದಿನ ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳ ಸಭೆಯನ್ನು ಕರೆದು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಮಸ್ಯೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇದೆ ಎಂದು ಸಚಿವರ ಗಮನಕ್ಕೆ ತಂದರು.

ಚಿತ್ರ ೨೫ ಕೆ.ಎಲ್.ಆರ್. ೦೩ : ಎಂ.ಎಲ್.ಸಿ. ಗೋವಿಂದರಾಜು ರವರ ಭಾವಚಿತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net