ಕೋಲಾರದ ಚೈತನ್ಯ ಕಾಲೇಜಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ,ಮಾದಕ ದ್ರವ್ಯ,ತಂಬಾಕು ವಸ್ತುಗಳಿಂದ ದೂರವಿರಿ/ಸುನೀಲ್ ಎಸ್.ಹೊಸಮನಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಮನುಷ್ಯನ ಜೀವನದಲ್ಲಿ ಇಂದು ಆಹಾರ, ನೀರು ಎಷ್ಟು ಮುಖ್ಯವೊ ಕಾನೂನು ಅಷ್ಟೆ ಮುಖ್ಯವಾಗಿದದ್ದು. ದೈನಂದಿನ ಬದುಕಿಗೆ ಅಗತ್ಯವಾದ ಕನಿಷ್ಟ ಕಾನೂನುಗಳ ಅರಿವು ಪಡೆಯಿರಿ, ಮಾದಕ ವಸ್ತುಗಳ ಸೇವನೆಗೆ ತುತ್ತಾಗದೇ ಅಪರಾಧ ಮುಕ್ತ ಜೀವನ ನಡೆಸಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಕರೆ ನೀಡಿದರು.

ನಗರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಕಾಲೇಜಿನ ಆವರಣದಲ್ಲಿ ಅಥವಾ ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಕಿವಿಮಾತು ಹೇಳಿದರು.

ತಂಬಾಕು, ಮಾದಕ ವಸ್ತು ನಿಯಂತ್ರಣಕ್ಕೆ ಕೋಟ್ಟಾ ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯಿದೆ ಜಾರಿಯಲ್ಲಿದ್ದು, ೧೮ ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಅಪರಾಧವಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಭ್ರೂಣ ಲಿಂಗ ಪತ್ತೆ ಮಾಡುವುದು ಸಹಾ ಅಪರಾಧವಾಗಿದ್ದು, ಇದಕ್ಕೆ ಕಠಿಣ ಶಿಕ್ಷೆ ಇದೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೂ ಸರ್ಕಾರ ಕಾನೂನು ಮಾಡಿದ್ದು, ಇದರ ಕುರಿತು ನೀವು ಅರಿತು ಸಮಾಜಕ್ಕೂ ತಿಳಿಸಿಕೊಡಿ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರಾಷ್ಟಿçÃಯ ತಂಬಾಕು ನಿಯಂತ್ರಣ ಘಟಕದ ನೋಡಲ್ ಅಧಿಕಾರಿ ಡಾ.ಎಂ.ಎ.ಚಾರಣಿ ಮಾತನಾಡಿ, ನೀವು ದುಶ್ಚಟಗಳಿಂದ ದೂರವಿರಿ, ಮಾದಕ,ತಂಬಾಕು ವಸ್ತುಗಳ ಸೇವನೆ ಮಾಡದಿರಿ, ಜೀವಕ್ಕೆ ಮಾತ್ರವಲ್ಲ, ನಿಮ್ಮನ್ನು ಅಪರಾಧಕ್ಕೆ ಈ ವಸ್ತುಗಳು ಪ್ರೇರೇಪಿಸುತ್ತವೆ ಎಂದು ಎಚ್ಚರಿಸಿದರು.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಮಾರಕವಾಗಿ ಪರಿಣಮಿಸುತ್ತಿದೆ, ಕ್ಯಾನ್ಸರ್ ಧೂಮಪಾನ, ತಂಬಾಕು ಸೇವನೆಯಿಂದಲೇ ಅತಿ ಹೆಚ್ಚು ಹರಡುತ್ತಿದೆ ಎಂಬುದನ್ನು ಅರಿತು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಸೇವಿಸದಿರಿ, ನಿಮ್ಮ ಶೈಕ್ಷಣಿಕ ಬದುಕಿನಲ್ಲಿ ಅಂತಹ ತಪ್ಪು ಮಾಡದಿರಿ ಮತ್ತು ಇತರರಿಗೂ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎನ್‌ಎಎಲ್‌ಎಸ್‌ಎ ಸಹಾಯವಾಣಿ ೧೫೧೦೦ ಕುರಿತು ಮಾಹಿತಿ ನೀಡಲಾಯಿತು, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಜಿಲ್ಲಾ ಸಮಾಲೋಚಕ ಪಿ.ಮಹಮದ್, ಚೈತನ್ಯ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಮಹಮದ್ ಶೋಯಬ್, ಚೈತನ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ, ಚೈತನ್ಯ ಇನ್ಸಿಟ್ಯೂಟ್ ಸಂಸ್ಥಾಪಕ ಸುಬ್ರಮಣಿ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ ೦೪ ಕೆ.ಎಲ್.ಆರ್. ೦೪ ಕೋಲಾರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net