ಕೋಲಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ / ಎ.ಡಿ.ಸಿ. ಎ.ಸಿ ವರ್ಗಾವಣೆ / ಇನ್ನು ಪ್ರಮುಖ ಉನ್ನತ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಸಾಧ್ಯತೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಎನ್.ಮುನಿವೆಂಕಟೇಗೌಡ
ಜಿಲ್ಲಾ ಮಟ್ಟದಲ್ಲಿರುವ ಪ್ರಮುಖ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದ್ದು, ಈಗಾಗಲೇ ಅಪರ ಜಿಲ್ಲಾಧಿಕಾರಿ ಮತ್ತು ಸಹಾಯಕ ಕಮೀಷನರ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಕೆಲವು ಇಲಾಖೆಗಳ ಮುಖ್ಯಸ್ಥರನ್ನು ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಯಾವುದೇ ಸರ್ಕಾರ ಬದಲಾವಣೆಯಾದರೆ ಹಿಂದಿನ ಸರ್ಕಾರದಲ್ಲಿ ಬಂದಿದ್ದAತಹ ಅಧಿಕಾರಿಗಳನ್ನು ಸರ್ಕಾರ ಬದಲಾವಣೆಯಾದ ನಂತರ ಆಯಾ ಶಾಸಕರು ಅಧಿಕಾರಿಗಳನ್ನು ವರ್ಗಾವಣೆ ಮಾಡಿಸುತ್ತಾರೆ. ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರ್ಕಾರ ಬದಲಾವಣೆ ಆದ ನಂತರ ನೂತನವಾಗಿ ಕೋಲಾರದಲ್ಲಿ ಅಧಿಕಾರ ವಹಿಸಿಕೊಂಡಿರುವುದನ್ನು ಬಿಟ್ಟರೆ ಉಳಿದಂತೆ ಪ್ರಮುಖ ಇಲಾಖೆಗಳಲ್ಲಿ ಅಧಿಕಾರಿಗಳಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಬಂದAತವರಾಗಿದ್ದಾರೆ.

ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಂದಾಗಲಿಲ್ಲ. ಲೋಕಸಭಾ ಮುಗಿದ ನಂತರ ಸ್ಥಳೀಯ ಶಾಸಕರ ಶಿಫಾರಸ್ಸಿನ ಮೇರೆಗೆ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಂದಾಗಿದ್ದಾರೆ.

ಕಳೆದ ಗುರುವಾರ ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ್ ಹಾಗೂ ಎ.ಸಿ.ವೆಂಕಟಲಕ್ಷಿö್ಮÃ ಇವರನ್ನು ಸರ್ಕಾರ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಅಪರ ಜಿಲ್ಲಾಧಿಕಾರಿಯಾಗಿ ಎಸ್.ಎನ್.ಮಂಗಳ ಹಾಗೂ ಸಹಾಯಕ ಕಮೀಷನರ್ ಡಾ.ಹೆಚ್.ಪಿ.ಎಸ್.ಮೈತ್ರಿ ರವರನ್ನು ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಇನ್ನು ಕೆಲವು ಪ್ರಮುಖ ಇಲಾಖೆಗಳ ಅಧಿಕಾರಿಗಳ ವರ್ಗಾವಣೆಯ ತಲೆದಂಡವೂ ಇದೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ಕೋಲಾರ ತಹಶೀಲ್ದಾರ್ ಹರ್ಷವರ್ಧನ್ ಹಾಗೂ ಪೌರಾಯುಕ್ತ ಶಿವಾನಂದ ಇವರನ್ನು ಎತ್ತಂಗಡಿ ಮಾಡುತ್ತಾರೆ ಎನ್ನಲಾಗಿದೆ. ಇದರ ಜೊತೆಗೆ ಕೆಲವು ತಾಲ್ಲೂಕುಗಳ ತಹಶೀಲ್ದಾರರನ್ನು ಸಹ ಎತ್ತಂಗಡಿ ಆಗುತ್ತಾರೆಂಬ ಸುದ್ದಿ ಕಾಂಗ್ರೇಸ್ ವಲಯದಲ್ಲಿ ಕೇಳಿ ಬರುತ್ತಿದೆ.

ಜಿಲ್ಲಾ ರಕ್ಷಣಾಧಿಕಾರಿಗಳು ಸಹ ಹಿಂದಿನ ಸರ್ಕಾರದ ಅವಧಿಯಲ್ಲಿ ಬಂದಿರುವುದರಿAದ ಸದ್ಯಕ್ಕೆ ಅವರ ಬಗ್ಗೆ ಜಿಲ್ಲೆಯ ಶಾಸಕರನ್ನು ಹೆಚ್ಚಿನ ಒಲವು ಇರುವುದರಿಂದ ವರ್ಗಾವಣೆ ಪಟ್ಟಿಯಲ್ಲಿ ಅವರ ಹೆಸರು ಕೇಳಿಬರುತ್ತಿಲ್ಲ. ಆದರೂ ಸಹ ಕೋಲಾರದಲ್ಲಿ ೨ ವರ್ಷಕ್ಕಿಂತ ಹೆಚ್ಚಿನ ಕಾಲ ಯಾವುದೇ ಎಸ್.ಪಿ. ಕಾರ್ಯನಿರ್ವಹಿಸಿಲ್ಲ.

ಕಳೆದ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಎಸ್.ಪಿ. ಆಗಿದ್ದ ಡಿ.ದೇವರಾಜ್ ಸ್ಥಳೀಯರಾಗಿದ್ದ ಕಾರಣ ಅವರು ಬದಲಾಗಿ ಹಾಲಿ ಎಸ್.ಪಿ. ನಾರಾಯಣ್ ಕೋಲಾರಕ್ಕೆ ವರ್ಗಾವಣೆಯಾಗಿ ಬಂದಿರುವುದು ಇನ್ನು ಅವರ ಅವಧಿ ಒಂದೂವರೆ ವರ್ಷ ಪೂರ್ಣಗೊಂಡಿಲ್ಲ. ಆದ ಕಾರಣ ಎಸ್.ಪಿ.ರವರ ವರ್ಗಾವಣೆ ಬಗ್ಗೆ ಮಾಹಿತಿ ಇಲ್ಲ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಹೊರತು ಪಡಿಸಿದರೆ ಉಳಿದಂತೆ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳು ಕಾರ್ಯ ವೈಖರಿಯ ಬಗ್ಗೆ ಸ್ಥಳೀಯ ಶಾಸಕರುಗಳಿಗೆ ಅಸಮಾಧಾನವಿತ್ತು. ಅದರಲ್ಲೂ ವಿಶೇಷವಾಗಿ ಕಾಂಗ್ರೇಸ್ ಶಾಸಕ ಮಾತಿಗೆ ಮನ್ನಣೆ ಸಿಗುತ್ತಿಲ್ಲ. ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲಿ ಬಂದಿರುವ ಅಧಿಕಾರಿಗಳು ಆದ ಕಾರಣ ಅವರನ್ನು ವರ್ಗಾವಣೆ ಮಾಡಿಸಬೇಕೆಂಬ ಒತ್ತಾಯ ಸರ್ಕಾರ ಮಟ್ಟದಲ್ಲಿ ನಡೆಯುತ್ತಿತ್ತು.

ನಗರಸಭೆಯ ಪೌರಾಯುಕ್ತರ ವಿರುದ್ಧ ಅಭಿವೃದ್ಧಿ ವಿಷಯಗಳಲ್ಲಿ ಪಕ್ಷಾತೀತವಾಗಿ ಸದಸ್ಯರ ಮಧ್ಯೆ ಆಗಾಗ ಮಾತಿನ ಚಕಮಕಿಗಳು ನಡೆಯುತ್ತಿದ್ದವು. ಸದಸ್ಯರಿಗೆ ಪೌರಾಯುಕ್ತರು ಬೇಡದ ರೀತಿಯಲ್ಲಿ ಆಗಿದ್ದು, ವರ್ಗಾವಣೆ ಮಾಡಲು ಶಾಸಕರು ಮತ್ತು ಸಚಿವರವರಲ್ಲಿ ಸದಸ್ಯರು ಒತ್ತಡ ತರುವ ಕೆಲಸ ನಿರಂತರವಾಗಿ ಮುಂದುವರೆದಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಆಗಬೇಕಾದರೆ ಆಡಳಿತದ ನಗ ಹೊತ್ತಿರುವ ಅಧಿಕಾರಿಗಳು ಮತ್ತು ಶಾಸಕರ ಮಧ್ಯೆ ಹೊಂದಾಣಿಕೆ ಇದ್ದರೆ ಮಾತ್ರ ಜಿಲ್ಲೆ ಮತ್ತು ತಾಲ್ಲೂಕುಗಳು ಅಭಿವೃದ್ಧಿಯಾಗುತ್ತದೆ. ಅದೇ ರೀತಿ ನಗರ ಮತ್ತು ಪುರಸಭೆಯ ಮುಖ್ಯಸ್ಥರು ಮತ್ತು ಸದಸ್ಯರ ಮಧ್ಯೆ ಹೊಂದಾಣಿಕೆ ಇದ್ದರೆ ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಮತ್ತು ಅಭಿವೃದ್ಧಿಯಾಗುತ್ತದೆ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಂದಿರುವAತಹ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹೆಚ್ಚಾಗಿರುವ ಕಾರಣ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗಿಂತ ಗ್ಯಾರಂಟಿ ಯೋಜನೆಗಳನ್ನು ಕಾರ್ಯಗತಗೊಳಿಸುವುದು ಅಧಿಕಾರಿಗಳ ಮೇಲೆ ದೊಡ್ಡ ಜವಾಬ್ದಾರಿಯಾಗಿತ್ತು. ಅಲ್ಲಿಯ ತನಕ ಅಭಿವೃದ್ಧಿಯ ಕಡೆ ಅಧಿಕಾರಿಗಳಾಗಲೀ ಶಾಸಕರಾಗಲೀ ಚಿಂತನೆ ನಡೆಸಲಿಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳಿAದ ಸ್ವಲ್ಪ ಮಟ್ಟಿಗೆ ಸರ್ಕಾರಕ್ಕೆ ಅನುಕೂಲವಾಗಿದ್ದು, ಅಭಿವೃದ್ಧಿ ವಿಷಂiÀiದಲ್ಲಿ ಶೂನ್ಯವಾದ ಕಾರಣ ಅಭಿವೃದ್ಧಿಯೇ ಮುಖ್ಯ ಎಂಬುವುದು ಸರ್ಕಾರಕ್ಕೆ ಜ್ಞಾನೋದಯವಾದ ಕಾರಣ ಇನ್ನು ಮುಂದೆಯಾದರೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ.

ಸ್ಥಳೀಯ ಶಾಸಕರು ಮಾತಿಗೆ ಮನ್ನಣೆ ನೀಡದ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ಸರ್ಕಾರ ಮುಂದಾಗಿದ್ದು, ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಇಲಾಖೆಗಳ ಇಬ್ಬರು ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದ್ದು, ಇನ್ನು ಕೆಲವು ಪ್ರಮುಖ ಇಲಾಖೆಗಳ ಅಧಿಕಾರಿಗಳನ್ನು ಎತ್ತಂಗಡಿ ಮಾಡಲು ಮುಂದಾಗಿದ್ದಾರೆ.

ಕೋಟ್ :
ಸರ್ಕಾರ ಬದಲಾವಣೆಯಾದರೆ ಹಿಂದಿನ ಸರ್ಕಾರದಲ್ಲಿ ವರ್ಗಾವಣೆಯಾಗಿ ಬಂದಿರುವAತಹ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡುವುದು ಸಹಜ. ಸರ್ಕಾರವೇ ಇದರ ಬಗ್ಗೆ ಕಾಳಜಿ ವಹಿಸಿದೆ. ಶಾಸರ‍್ಯಾರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಎಂದು ಸರ್ಕಾರಕ್ಕೆ ಶೀಫಾರಸ್ಸು ಮಾಡಿಲ್ಲ. ಜಿಲ್ಲೆಯಲ್ಲಿ ಇಲಾಖಾವಾರು ಅಧಿಕಾರಿಗಳ ಪ್ರಗತಿಯನ್ನು ಪರಿಶೀಲಿಸಿ ಪ್ರಗತಿಯಲ್ಲಿ ಹಿಂದಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮುಂದಾಗಿದ್ದಾರೆ.

-ಎಂ.ಎಲ್.ಅನಿಲ್ ಕುಮಾರ್, ವಿಧಾನಪರಿಷತ್ ಸದಸ್ಯರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net