ಕೋಲಾರದಲ್ಲಿ ಕಾಂಗ್ರೇಸ್‌ನಲ್ಲಿ ಭಿನ್ನಾಭಿಪ್ರಾಯಗಳಿಲ್ಲ /ಎಲ್ಲರ ಸಮ್ಮುಖದಲ್ಲಿ ಅಭ್ಯರ್ಥಿ ಆಯ್ಕೆ / ಕೋಲಾರ ಕಾಂಗ್ರೇಸ್ ಭದ್ರಕೋಟೆ/ ಡಿ.ಕೆ.ಶಿವಕುಮಾರ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಕೋಲಾರ ಜಿಲ್ಲೆ ಕಾಂಗ್ರೇಸ್ ಪಕ್ಷದ ತವರು. ಕಳೆದ ಬಾರಿ ಹೊರತುಪಡಿಸಿ ಉಳಿದಂತೆ ಲೋಕಸಭಾ ಕ್ಷೇತ್ರ ಕಾಂಗ್ರೇಸ್ ಭದ್ರಕೋಟೆ ನಮ್ಮದೇ ಆದ ಭಿನ್ನಾಭಿಪ್ರಾಯಗಳಿಂದ ಕಳೆದ ಬಾರಿ ಕಳೆದುಕೊಳ್ಳುವಂತಾಯಿತು. ಈ ಬಾರಿ ಬಿಜೆಪಿ ಸೋಲುತ್ತದೆ ಎಂದು ತಿಳಿದು ಜೆಡಿಎಸ್ ನವರಿಗೆ ಟಿಕೇಟ್ ನೀಡಲಾಗಿದೆ. ಇಡೀ ರಾಜ್ಯವನ್ನು ಗಮನದಲ್ಲಿಟ್ಟುಕೊಂಡು ಕೋಲಾರಕ್ಕೆ ಯುವಕರೊಬ್ಬರಿಗೆ ಅವಕಾಶ ನೀಡಲಾಗಿದೆ. ಇಡೀ ಪಕ್ಷ ಒಗ್ಗಟ್ಟಿನಿಂದ ಕೆಲಸ ಮಾಡಿ ೩ ಲಕ್ಷಕ್ಕೂ ಹೆಚ್ಚು ಅಧಿಕ ಮತಗಳಿಂದ ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಕೆ.ವಿ.ಗೌತಮ್ ಗೆಲವು ಸಾಧಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಾಂಗ್ರೇಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ನಂತರ ನಗರದಲ್ಲಿ ಏರ್ಪಡಿಸಲಾಗಿದ್ದ ರೋಡ್‌ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ಕೋಲಾರದ ಅಭ್ಯರ್ಥಿಯ ಬಗ್ಗೆ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲರನ್ನೂ ಸೇರಿಸಿ ಅಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಮುದಾಯಕ್ಕೆ ಕೊಡಬೇಕೆಂಬ ಕೂಗು ಇತ್ತು ಆದರೆ ರಾಜ್ಯದ ಹಿತ ದೃಷ್ಟಿಯಿಂದ ಎಲ್ಲರನ್ನೂ ಸೇರಿಸಿಕೊಂಡು ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ.

ಹೊರಗಿನ ಅಭ್ಯರ್ಥಿ ಎಂಬುದರ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿ. ಕಳೆದ ಬಾರಿಯ ಅಭ್ಯರ್ಥಿ ಹೊರಗಿನವರೇ ಅವರೂ ಸಹ ಬೆಂಗಳೂರಿನಲ್ಲಿ ಇದ್ದವರು. ಈ ದೇಶದಲ್ಲಿ ಬಲಿಷ್ಠವಾಗಿರುವ ಕರ್ನಾಟಕದಲ್ಲಿ ಕಾಂಗ್ರೇಸ್ ಪಕ್ಷ ಮಾತ್ರ. ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೇಸ್ ಪಥನವಾಗುತ್ತದೆಂದು ಹಗಲು ಕನಸು ಹಾಗೂ ಹಗಲು ಬಾವಿಗೆ ಬೀಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೇಸ್ ಅತ್ಯಧಿಕ ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಕೋಲಾರದಲ್ಲಿ ನಮ್ಮ ಅಭ್ಯರ್ಥಿ ಸಮರ್ಥರಿದ್ದಾರೆ. ಅದಕ್ಕಾಗಿಯೇ ಅವರನ್ನು ಚುನಾವಣೆಗೆ ಇಳಿಸಲಾಗಿದೆ. ಕೋಲಾರದಲ್ಲಿ ಈ ಬಾರಿ ಗೆಲವು ನಮ್ಮದೇ ಆಗಿರುತ್ತದೆ. ಇಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ.

ಚಿತ್ರ ೦೪ ಕೆ.ಎಲ್.ಆರ್. ೦೩ : ಡಿ.ಕೆ.ಶಿವಕುಮಾರ್ ರವರ ಭಾವಚಿತ್ರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net