ಕೋಳಿಮರಿಗಳನ್ನು ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನ

application 2
Published on

ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತ, ಬೆಂಗಳೂರು ರವರ ಸಹಯೋಗದಲ್ಲಿ 2024-25ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮಹಿಳೆಯರಿಗೆ ಅವರ ಆರ್ಥಿಕ ಜೀವನ ಮಟ್ಟ ಸುಧಾರಣೆಗಾಗಿ ಸರ್ಕಾರದಿಂದ ವಿಷೇಶ ಯೋಜನೆಯನ್ನು ಹಮ್ಮಿಕೊಂಡು ಸಾಮಾನ್ಯ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಿಗೆ 5 ವಾರದ 20 ಕೋಳಿಮರಿಗಳನ್ನು ಉಚಿತವಾಗಿ ನೀಡುವ ಯೋಜನೆಯನ್ನು ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗಿದ್ದು, ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ಗ್ರಾಮೀಣ ರೈತ ಬಡ ಮಹಿಳೆಯರು ಆಯಾ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ), ಪಶು ಪಾಲನಾ ಇಲಾಖೆಯ ಪಶು ವೈದ್ಯಕೀಯ ಇಲಾಖೆ, ಪಶು ಆಸ್ಪತ್ರೆ ಇವರನ್ನು ಸಂಪರ್ಕಿಸಿ ನಿಗಧಿತ ನಮೂನೆಯ ಅರ್ಜಿ ಪಡೆದುಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಮೇ 23 ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಪಶು ಪಾಲನಾ ಇಲಾಖೆಯ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಅಥವಾ ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ಪಶು ಪಾಲನಾ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net