ಕೋವಿಡ್ ನಿಂದ ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಿಧನ

Published on

ಉಡುಪಿ: ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ‌. ಉತ್ತರ ಕನ್ನಡ ಜಿಲ್ಲೆ ಬನವಾಸಿ ಮೂಲದ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸವಿದ್ದರು‌. ಉಡುಪಿ ಸಹಾಯಕ ನಿರ್ದೇಶಕರಾಗಿ ಕಳೆದ ವರ್ಷ 24 ರಂದು ಅಧಿಕಾರ ಸ್ವೀಕರಿಸಿದ್ದರು. ಪಡುಬಿದ್ರಿ ಬೀಚ್ ಬ್ಲೂ ಫ್ಲಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಇಲಾಖೆ ಸೇರುವ ಮುನ್ನ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ.

ಡಿಸಿ ಸಂತಾಪ: ಅತ್ಯಂತ ನಿಷ್ಠೆಯ ಸಹೋದ್ಯೋಗಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಸೋಮಶೇಖರ್ ಅವರನ್ನು ಕಳೆದುಕೊಂಡು ಹೃದಯ ಭಾರವಾಗಿದೆ ಇವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net