ಕೋವಿಶೀಲ್ಡ್ ಲಸಿಕೆ ಅಭಿಯಾನಕ್ಕೆ ಚಾಲನೆ

DSC_0166 copy
Published on

ಯಾದಗಿರಿ: ಜಿಲ್ಲಾದ್ಯಂತ ಕರೊನಾ ಸಂಜೀವಿನಿ ಎನ್ನಲಾದ ಕೋವಿಶೀಲ್ಡ್ ಲಸಿಕೆ ಅಭಿಯಾನ ಶನಿವಾರ ಆರಂಭಗೊಂಡಿತು. ಯಾದಗಿರಿ ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಅಶೋಕ ಅಗ್ನಿ ಅವರಿಗೆ ವೈದ್ಯಾಧಿಕಾರಿಗಳು ಮೊದಲ ಲಸಿಕೆ ನೀಡಿದರು. ಶಾಸಕ ವೆಂಕಟರಡ್ಡಿ ಮುದ್ನಾಳ್, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯಾಧಿಕಾರಿಗಳು ಅಭಿಯಾನದಲ್ಲಿ ಭಾಗಿಯಾಗಿದ್ದರು.

ಜಿಲ್ಲೆಯ 5 ಆರೋಗ್ಯ ಕೇಂದ್ರಗಳಲ್ಲಿ ಮೊದಲ ಹಂತದಲ್ಲಿ 445 ಫಲಾನುಭವಿಗಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭಗೊಂಡಿದೆ. ಇಡೀ ವಿಶ್ವಕ್ಕೆ ಕಂಟಕವಾದ ಕರೊನಾ ಭಾರತದಲ್ಲಿ ಲಸಿಕೆ ಸಿಕ್ಕಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಹುದೊಡ್ಡ ಸಾಧನೆಯಾಗಿದೆ ಎಂದು ಶಾಸಕ ಮುದ್ನಾಳ್ ಗುಣಗಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net