ಕ್ರಿಮಿನಾಶಕ ಮಾತ್ರೆ ಸೇವಿಸಿ ರೈತ ಆತ್ಮಹತ್ಯೆ

Published on

ಹನಗೋಡು: ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಹನಗೋಡು ಹೋಬಳಿ ನೇರಳಕುಪ್ಪೆ ಗ್ರಾಮದ ನಿವಾಸಿ ಮಹೇಶ (46) ಆತ್ಮಹತ್ಯೆ ಮಾಡಿಕೊಂಡವರು. ಕಾಮಗೌಡನಹಳ್ಳಿ ಗ್ರಾಮದ ಸರ್ವೇ ನಂಬರ್ 4/2 ರಲ್ಲಿ 30 ಗುಂಟೆ ಜಮೀನು, ತಂದೆ ಸ್ವಾಮಿಗೌಡ ಹೆಸರಿನಲ್ಲಿ ಹೈರಿಗೆ ಗ್ರಾಮದ ಸರ್ವೇ ನಂಬರ್ 37/1ರಲ್ಲಿ 2.17 ಗುಂಟೆ ಜಮೀನು ಹೊಂದಿದ್ದರು. ತನ್ನ ಜಮೀನಿನ ಜತೆಗೆ ಬೇರೆಯವರ ಜಮೀನನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಅಲ್ಲದೆ ಟ್ರಾೃಕ್ಟರ್ ತೆಗೆದುಕೊಳ್ಳಲು ಫೈನಾನ್ಸ್, ಬ್ಯಾಂಕ್‌ನಿಂದ ಸಾಲ ಪಡೆದಿದ್ದರು.


ಈ ಬಾರಿ ಮಳೆಯಿಂದಾಗಿ ಶುಂಠಿ ಬೆಳೆ ನಷ್ಟವಾಗಿತ್ತು. ಇದರಿಂದ ನೊಂದ ಅವರು ಗುರುವಾರ ರಾತ್ರಿ ಮನೆಯಲ್ಲಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಮನೆಯವರು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ಮಗ ಅಶ್ವತ್ಥ್ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಶ್ರುಕವಾರ ದೂರು ದಾಖಲಿಸಿದ್ದಾರೆ. ಪ್ರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net