ಕ್ರೀಡಾಕೂಟಗಳಿಗೆ ಉದ್ಯೋಗಾವಕಾಶ ಹೆಚ್ಚು

22 SARAG 04
ಸರಗೂರು ತಾಲೂಕಿನ ಪಟ್ಟಣದ ಜೆಎಸ್‌ಎಸ್ ಪ್ರೌಢಶಾಲಾ ಆವರಣದಲ್ಲಿ ವಲಯ ಮಟ್ಟದ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು. ರಾಧಿಕಾ ಶ್ರೀನಾಥ್, ಶ್ರೀನಿವಾಸ, ಉಮಾರಾಮು, ನಾಗರಾಜು ಇತರರು ಇದ್ದರು.
Published on

ಸರಗೂರು: ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾಪಟುಗಳು ಕ್ರೀಡಾ ಧರ್ಮ ಪಾಲಿಸಬೇಕು. ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಸಹಕಾರಿ ಎಂದು ಪ.ಪಂ. ಅಧ್ಯಕ್ಷೆ ರಾಧಿಕಾ ಶ್ರೀನಾಥ್ ತಿಳಿಸಿದರು.

ಪಟ್ಟಣದ ಜೆಎಸ್‌ಎಸ್ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರಗೂರು ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದವರಿಗೆ ಪೊಲೀಸ್ ಇಲಾಖೆ, ಸೇನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಲಭಿಸಲಿದೆ. ಹಲವು ಕ್ಷೇತ್ರಗಳಲ್ಲಿ ಪ್ರೋತ್ಸಾಹ ಸಿಗಲಿದೆ. ಇಂತಹ ಅವಕಾಶ ಕಳೆದುಕೊಳ್ಳದೆ ಉತ್ತಮ ಸಾಧನೆಯೊಂದಿಗೆ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದ ಪ.ಪಂ. ಸದಸ್ಯ ಶ್ರೀನಿವಾಸ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನವನ್ನು ಸದ್ಬಳಕೆ ಮಾಡಿಕೊಂಡರೆ ಭವಿಷ್ಯ ಉಜ್ವಲವಾಗಿರಲಿದೆ ಎಂದರು.

ಪ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾರಾಮು, ಸದಸ್ಯರಾದ ಸಣ್ಣತಾಯಮ್ಮ, ಚೈತ್ರಾ ಸ್ವಾಮಿ, ದಿವ್ಯಾ ನವೀನ್, ತಾಲೂಕು ದೈಹಿಕ ಶಿಕ್ಷಕ ಪರಿವೀಕ್ಷಕ ರಾಮಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷ ಜಿ.ನಾಗೇಶ್, ನಾಗರಾಜು, ಬೋಗನಂಜಯ್ಯ, ಸಣ್ಣಸೋಮಯ್ಯ, ರಾಜು ಎ.ಬಂಡಳ್ಳಿ, ಅಂತೋಣಿ ಸ್ವಾಮಿ, ಜಯರಾಮ್, ಮಂಜುನಾಥ, ಗಂಗಾಧರಯ್ಯ, ಮಹಮ್ಮದ್, ಕೃಷ್ಣಮೂರ್ತಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net