ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ

Winning or losing doesn't matter in sports
ನವನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳವಾರವಾದಿಂದ ಎರಡು ದಿನಗಳವರೆಗೆ ಹಮ್ಮಿಕೊಂಡಿದ್ದ ಬಾಗಲಕೋಟೆ ವಿಭಾಗದ ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಶಾಸಕ ಎಚ್.ವೈ.ಮೇಟಿ ಮಾತನಾಡಿದರು. ಮಾಧವ ಸೇವಾ ಕೇಂದ್ರದ ಅಧ್ಯಕ್ಷ ನಾಗರಾಜ್ ಹದ್ಲಿ, ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಜಿಗಿದಿನ್ನಿ, ಯುವ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ್ ಹೊಕ್ರಾಣಿ, ಎಲ್.ಎಂ.ಮುದ್ದೇಬಿಹಾಳ, ರವಿ ಕುಮಟಗಿ, ಕೆಬಿಎಲ್ ಸಂಚಾಲಕ ವಿಜಯ ಬಳ್ಳಾರಿ, ದುಂಡಪ್ಪ ಎಳೆಮ್ಮೆ ಇದ್ದರು.
Published on


ಬಾಗಲಕೋಟೆ: ಕ್ರೀಡೆಯಲ್ಲಿ ಸೋಲು -ಗೆಲುವು ಮುಖ್ಯವಲ್ಲ. ಸಕ್ರಿಯವಾಗಿ ಭಾಗವಹಿಸಿ ಪ್ರತಿಭೆ ಮೆರೆಯೋದು ಮುಖ್ಯವಾಗಬೇಕು ಎಂದು ಶಾಸಕ ಎಚ್.ವೈ.ಮೇಟಿ ಹೇಳಿದರು.

ನವನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳವಾರವಾದಿಂದ ಎರಡು ದಿನಗಳವರೆಗೆ ಹಮ್ಮಿಕೊಂಡಿದ್ದ ಬಾಗಲಕೋಟೆ ವಿಭಾಗದ ಬಾಸ್ಕೆಟ್ ಬಾಲ್ ನೀ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಯು ಮನುಷ್ಯನ ಮಾನಸಿಕ ದೈಹಿಕ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕೇವಲ ಗೆಲ್ಲುವುದಕ್ಕಾಗಿ ಸ್ಪರ್ಧೆಯಲ್ಲಿ ಭಾಗವಹಿಸದೇ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿಕೊಳ್ಳಬೇಕು. ಬಾಸ್ಕೆಟ್ ಬಾಲ್ ಕ್ರೀಡೆಯು ಅತ್ಯಂತ ಚಾಕಚಕ್ಯತೆಯ ಆಟವಾಗಿದೆ. ಕಣ್ಣು, ಕಿವಿ, ಕೈ ಕಾಲು ಈ ಕ್ರೀಡೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಮಾಧವ ಸೇವಾ ಕೇಂದ್ರದ ಅಧ್ಯಕ್ಷ ನಾಗರಾಜ್ ಹದ್ಲಿ ಮಾತನಾಡಿ, ಮೊದಲಿನಿಂದಲೂ ಬಾಗಲಕೋಟೆ ಕ್ರೀಡೆಯಲ್ಲಿ ಅತ್ಯಂತ ಸಕ್ರಿಯವಾಗಿದೆ. ಹಾಕಿ ಕ್ರೀಡೆಗೆ ಹೆಚ್ಚು ಪ್ರಸಿದ್ಧಿಯಾಗಿದೆ. ಹಾಕಿ ಕ್ರೀಡೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಲು ಮತ್ತು ಕ್ರೀಡಾಪಟುಗಳನ್ನು ತಯಾರು ಮಾಡಲು ನವನಗರದಲ್ಲಿ ಹಾಕಿ ಕ್ರೀಡಾಂಗಣ ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದಾರೆ ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಆನಂದ ಜಿಗಿದಿನ್ನಿ ಮಾತನಾಡಿ, ಸುಸ್ಥಿರ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆಯು ಹೆಚ್ಚು ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಲವಲವಿಕೆಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಯುವ ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ್ ಹೊಕ್ರಾಣಿ, ಎಲ್.ಎಂ.ಮುದ್ದೇಬಿಹಾಳ, ರವಿ ಕುಮಟಗಿ, ಕೆಬಿಎಲ್ ಸಂಚಾಲಕ ವಿಜಯ ಬಳ್ಳಾರಿ, ದುಂಡಪ್ಪ ಎಳೆಮ್ಮೆ, ಬಾಗಲಕೋಟೆ ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ಡಾ. ಸುಧೀರ್ ಜಾಧವ್ ಸೇರಿದಂತೆ ಇತರರು ಇದ್ದರು. ಪ್ರಕಾಶ್ ಗುಳೇದಗುಡ್ಡ ಸ್ವಾಗತಿಸಿದರು. ಹುಚ್ಚೇಶ್ ಎಂ ಲಾಯದಗುಂದಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net