

ಮೈಸೂರು: ಶೈಕ್ಷಣಿಕ ಚಟುವಟಿಕೆಗಳು ರೂಪಿಸುವ ವ್ಯಕ್ತಿತ್ವಕ್ಕಿಂತ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ರೂಪಿಸುವ ವ್ಯಕ್ತಿತ್ವ ಭಿನ್ನವಾಗಿರುತ್ತದೆ ಎಂದು ಹಿಮಾಲಯ ಪರ್ವತಾರೋಹಿಯೂ ಆದ, ಜೆಎಸ್‌ಎಸ್ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಉಷಾ ಹೆಗ್ಡೆ ಅಭಿಪ್ರಾಯಪಟ್ಟರು.
ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸ್ನಾತಕೋತ್ತರ ವಿಭಾಗದ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುತ್ತಾ, ನಮ್ಮ ಸಾಧ್ಯತೆಗಳನ್ನು ಕಂಡುಕೊಳ್ಳುವುದಕ್ಕೆ ಪೂರಕವಾಗಿದೆ ಎಂದರು.