ಕ್ರೀಡೆಯಿಂದ ಆರೋಗ್ಯ ಸದೃಢ

11sunti02
Published on


ಕೊಡಗು : ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾನಸಿ ಮತ್ತು ದೈಹಿಕವಾಗಿ ಸದೃಢತೆ ಕಾಪಾಡಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ. ಕರುಬಯ್ಯ ಹೇಳಿದರು.

ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ 2023-24 ನೇ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು. ಇದರಿಂದ ಉತ್ತಮ ಆರೋಗ್ಯಕ್ಕೆ ಅನುಕೂಲ. ಕ್ರೀಡಾ ಸೋಲು-ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಪರಸ್ಪರ ಸಹಕಾರ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದರು.


ಪ್ರಾಂಶುಪಾಲರಾದ ಲತಾ ವಿದ್ಯಾರ್ಥಿಗಳು ತರಗತಿಯಲ್ಲಿ ಪಠ್ಯವಿಷಯಕ್ಕೆ ಕೊಡುವಷ್ಟು ಪ್ರಾಮುಖ್ಯತೆಯನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಬೇಕು. ವಿದ್ಯಾರ್ಥಿಗಳು ತಮ್ಮಲಿಲಿರುವ ಪ್ರತಿಭೆ ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ವೇದಿಕೆ ಒದಗಿಸುತ್ತವೆ ಎಂದರು. ಇದೇ ವೇಳೆ ಕ್ರೀಡಾ ಸ್ಪರ್ಧಾಳುಗಳಿಗೆ ಸನ್ಮಾನ ಮಾಡಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಖಜಾಂಜಿ ಆರ್.ರಮೇಶ್‌ಪಿಳೈ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net