ವಿಜಯವಾಣಿ ಸುದ್ದಿಜಾಲ ಕೋಲಾರ
ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪ್ರವೀಣ್.ಪಿ.ಬಾಗೇವಾಡಿ ತಿಳಿಸಿದರು.
ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ, ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ೨೦೨೫ ರಲ್ಲಿ ದೇಶವನ್ನು ಸಂಪೂರ್ಣ ಕ್ಷಯ ರೋಗ ಮುಕ್ತವಾಗಿಸುವ ಘೋಷಣೆ ಮಾಡಿದೆ. ಈ ದಿಸೆಯಲ್ಲಿ ಕಾರ್ಯ ಚಟುವಟಿಕೆಗಳೂ ನಡೆದಿವೆ. ಕ್ಷಯ ರೋಗ ನಿರ್ಮೂಲನೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜತೆಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂದಿಯ ಪಾತ್ರವೂ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀನಿವಾಸ ಮಾತನಾಡಿ, ಪ್ರಸಕ್ತ ವರ್ಷ ಕ್ಷಯ ರೋಗ ನಿಯಂತ್ರಣದಲ್ಲಿ ಜಿಲ್ಲೆ ಗಣನೀಯ ಪ್ರಗತಿ ಸಾಧಿಸಿದೆ. ಈಗ ಹ್ಯಾಂಡ್ ಹೆಲ್ಡ್ ಕ್ಷ-ಕಿರಣ ಯಂತ್ರದೊAದಿಗೆ ರೋಗಿಗಳು ಇರುವ ಗ್ರಾಮ, ಸಂತೆ, ಜಾತ್ರೆ, ಉತ್ಸವ ಮೊದಲಾದ ಕಡೆಗೆ ಹೋಗಿ ಕ್ಷಯ ರೋಗ ತಪಾಸಣೆ ಮಾಡಲಾಗುತ್ತಿದೆ. ರೋಗ ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಪೌಷ್ಠಿಕ ಆಹಾರಕ್ಕಾಗಿ ಕಡು ಬಡ ರೋಗಿಗಳ ಖಾತೆಗೆ ಹಣ ಸಹ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕ್ಷಯ ರೋಗ ಮುಕ್ತ ಗ್ರಾಮಪಂಚಾಯ್ತಿಗಳು :
ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿ ಯೋಜನೆಯಡಿ, ಕೋಲಾರ ತಾಲ್ಲೂಕಿನ ಅಮ್ಮನಲ್ಲೂರು, ಅರಾಭಿಕೊತ್ತನೂರು, ಅರಹಳ್ಳಿ, ಬೆಗ್ಲಿಹೊಸಹಳ್ಳಿ, ಬೆಳಮಾರನಹಳ್ಳಿ, ಚನ್ನಸಂದ್ರ, ಚೌಡದೇನಹಳ್ಳಿ, ಹರಟಿ, ಹೋಳೂರು, ಕ್ಯಾಲನೂರು, ಮಾರ್ಜೇನಹಳ್ಳಿ, ಸುಗಟೂರು, ಸೂಲೂರು, ತೊರದೇವಂಡಹಳ್ಳಿ. ಮುಳಬಾಗಿಲು ತಾಲ್ಲೂಕಿನ ದೇವರಾಯಸಮುದ್ರ, ದೊಲಪಲ್ಲಿ, ಗುಮ್ಮಕಲ್ಲು, ಹೆಚ್.ಗೊಲ್ಲಹಳ್ಳಿ, ಕೊಪ್ಪಲಮಡುಗು, ಮೊತ್ತಕಪಲ್ಲಿ, ಮುಡಿಗೆರೆ, ರಾಜೇಂದ್ರಹಳ್ಳಿ, ಉತ್ತನೂರು. ಬಂಗಾರಪೇಟೆ ತಾಲ್ಲೂಕಿನ ಎ.ಜೋತೆನಹಳ್ಳಿ, ದೊಡ್ಡೂರು, ಗುಲ್ಲಹಳ್ಳಿ, ಮಾಗೊಂದಿ. ಕೆ.ಜಿ.ಎಫ್ ತಾಲ್ಲೂಕಿನ ಕಮ್ಮಸಂದ್ರ ಮತ್ತು ಕಂಗAಡ್ಲಹಳ್ಳಿ. ಮಾಲೂರು ತಾಲ್ಲೂಕಿನ ಅಬ್ಬೇನಹಳ್ಳಿ, ಬಾಳಿಗಾನಹಳ್ಳಿ, ಬನಹಳ್ಳಿ, ದಾದಿನಾಯಕನದೊಡ್ಡಿ, ಮಡಿವಾಳ. ಶ್ರೀನಿವಾಸಪುರ ತಾಲ್ಲೂಕಿನ ಅರಿಕುಂಟೆ, ಬೈರಗಾನಹಳ್ಳಿ ಮತ್ತು ಕೊಳತೂರು ಸೇರಿದಂತೆ ೩೭ ಗ್ರಾಮ ಪಂಚಾಯಿತಿಗಳನ್ನು ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಗಳೆAದು ಘೋಷಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯ ರೋಗ ನಿವಾರಣಾಧಿಕಾರಿ ಡಾ.ಜಿ.ಪ್ರಸನ್ನಕುಮಾರ್, ಡಾ.ಚಂದನ್‌ಕುಮಾರ್, ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಪ್ರಾಥಿಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಆಶಾ ಮೆಂರ‍್ಸ್, ಹಾಗೂ ಎನ್.ಟಿ.ಇ.ಪಿ ಸಿಬ್ಬಂದಿ ಉಪಸ್ಥಿತರಿದ್ದರು.
ಚಿತ್ರ ೨೫ ಕೆ.ಎಲ್.ಆರ್. ೦೧ : ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಸಿ.ಇ.ಓ. ಡಾ.ಪ್ರವೀಣ್.ಪಿ.ಬಾಗೇವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಮುಂತಾದವರು ಇದ್ದರು.