ಕ್ಷೇತ್ರ ಅಭಿವೃದ್ಧಿಗೆ ೪೦೦ ಕೋಟಿ / ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು / ಶಾಲೆಗಳಿಗೆ ಗುಣಮಟ್ಟದ ಬಿಸಿಯೂಟ ನೀಡಬೇಕು / ಸಿಕ್ಕಿಬಿದ್ದರೆ ಶಿಸ್ತು ಕ್ರಮ ಗ್ಯಾರಂಟಿ / ಕೊತ್ತೂರು ಮಂಜುನಾಥ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಬಂದಿದೆ. ನಾವೇ ವಾರಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಲಿದ್ದೇವೆ. ಏನಾದರೂ ತಪ್ಪು ನಡೆದರೆ ಸ್ಥಳದಲ್ಲಿಯೇ ಶಿಸ್ತು ಕ್ರಮಕ್ಕೆ ಆದೇಶಿಸಲಾಗುತ್ತದೆ. ತಪ್ಪು ನಡೆಯದ ರೀತಿಯಲ್ಲಿ ಕೆಲಸ ಮಾಡಿ ಎಂದು ಅಕ್ಷರ ದಾಸೋಹ ಅಧಿಕಾರಿಗಳಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಹೆಚ್ಚರಿಕೆ ನೀಡಿದರು.

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಓದಲು ಬರೆಯಲು ಪೂರಕವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ ಮಧ್ಯಾಹ್ನದ ಬಿಸಿಯೂಟ ಗುಣಮಟ್ಟದಿಂದ ಇರಬೇಕು. ಶಾಲೆಯಲ್ಲಿಯೇ ಶಿಕ್ಷಕರು ಕೂಡ ಬಿಸಿಯೂಟ ಕಡ್ಡಾಯವಾಗಿ ತಿನ್ನಬೇಕು. ಯಾವ ಸಂದರ್ಭದಲ್ಲಾದರೂ ನಾನು ಖುದ್ದು ಭೇಟಿ ಮಾಡತ್ತೇನೆ. ಸಿಕ್ಕಿಬಿದ್ದರೆ ಕ್ರಮ ಗ್ಯಾರಂಟಿ ಎಂದು ತಿಳಿಸಿದರು

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಮತ್ತು ಜಾಗ ಇರುವ ರೀತಿಯಲ್ಲಿ ಮಾಡುತ್ತಿದ್ದೇವೆ. ಅಂಗನವಾಡಿ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಹತ್ವವನ್ನು ಕೊಡಬೇಕಾಗಿದೆ. ಅವರಿಗೆ ಮುಂದಿನ ಭವಿಷ್ಯ ಕಾಣುವಂತೆ ಮಾಡಬೇಕಾಗಿದೆ. ಕೆಲವು ಕಡೆ ದೇವಸ್ಥಾನಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ. ಬಾಲ್ಯ ವಿವಾಹದಲ್ಲಿ ಭಾಗವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮತ್ತು ಪೋಲಿಸರಿಗೆ ಸೂಚನೆ ನೀಡಿದರು.

ಗ್ರಾಮಗಳಲ್ಲಿ ಸುಮಾರು ಏಳು ಎಂಟು ತಿಂಗಳ ಹಿಂದೆ ಜೆಜೆಎಂ ಯೋಜನೆಯಲ್ಲಿ ಕುಡಿಯುವ ನೀರಿಗೆ ರಸ್ತೆ ಅಗೆದು ಹಾಗೇ ಬಿಡಲಾಗಿದೆ. ಇದರಿಂದಾಗಿ ಮಕ್ಕಳು, ಹಿರಿಯರು, ಜಾನುವಾರುಗಳು ಬಿದ್ದು ಗಾಯಗಳಾಗಿವೆ. ಜನರಿಗೆ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿದೆ ಕೂಡಲೇ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಕೊಡುವ ಕೆಲಸವನ್ನು ಮಾಡಬೇಕು ಎಂದರು.

ಇದಕ್ಕೆ ಉತ್ತರಿಸಿದ ಜೆಜೆಎಂ ಇಂಜಿನೀಯರ್, ಜೆಜೆಎಂ ಯೋಜನೆಯಲ್ಲಿ ೩೦೯ ಹಳ್ಳಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಪರೀಕ್ಷಾ ವರದಿ ಬರುವವೆರೆಗೆ ಕಾಮಗಾರಿ ಪೂರ್ಣಗೊಳಿಸಲು ಆಗುತ್ತಿಲ್ಲ. ಆರೇಳು ತಿಂಗಳು ಹಿಡಿಯುತ್ತದೆ. ವಿಳಂಬ ಮಾಡುತ್ತಿದ್ದಾರೆ. ಆದಷ್ಟು ಬೇಗ ಮುಗಿಸಲು ಕ್ರಮ ವಹಿಸುತ್ತೇವೆ ಎಂದರು.

ಕ್ಷೇತ್ರದ ಅಭಿವೃದ್ಧಿಗೆ ೪೦೦ ಕೋಟಿ :
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಹಣ ಕೊರತೆ ಎಲ್ಲ, ಹಣವನ್ನು ಗ್ಯಾರಂಟಿಗಳಿಗೆ ಬಳಕೆಯಾಗಿದೆ ಎಂದು ವಿರೋಧಿಗಳು ಹೊರಗಡೆ ಅಪಪ್ರಚಾರ ಮಾಡತ್ತಾರೆ. ಅವರಿಗೆ ಉತ್ತರವನ್ನು ನೀವುಗಳೇ ಕೊಡಬೇಕಾಗಿದೆ. ಕೋಲಾರ ಕ್ಷೇತ್ರಕ್ಕೆ ೪೦೦ ಕೋಟಿ ಅನುದಾನ ಬಂದಿದೆ. ಇನ್ನೂ ಬರುತ್ತೇವೆ ಕೇಳಿದಷ್ಟು ಹಣ ಕೊಡಕ್ಕೆ ಸರ್ಕಾರ ಬದ್ದವಾಗಿದೆ ಅಭಿವೃದ್ಧಿ ಮಾಡಲು ನೀವುಗಳು ಸಿದ್ದರಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮುಂದಿನ ಬಾರಿ ನಡೆಯುವ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಮತ್ತೊಂದು ಸಭೆಯಲ್ಲಿ ಎಂದು ಸಬೂಬುಗಳನ್ನು ಹೇಳಬಾರದು. ಮಧ್ಯೆ ಮಧ್ಯೆ ಸಭೆಯಿಂದ ಎದ್ದು ಹೋಗಬಾರದು. ಈ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಲು ಇ.ಓ. ರವರಿಗೆ ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಗೆ ಬದ್ದವಾಗಿ ಕೆಲಸ ಮಾಡತ್ತಿದೆ. ಕೆಲವು ಕಡೆಗಳಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ, ಕಾಮಗಾರಿ ನಡೆಸದೇ ಇರುವುದು ಸರಿಯಲ್ಲ. ಕೂಡಲೇ ಕಾಮಗಾರಿ ಪ್ರಾರಂಭ ಮಾಡಬೇಕು. ಕಾಮಗಾರಿ ನಡೆಯುವ ಕಡೆ ಬೇಗ ಮುಗಿಸುವ ಕೆಲಸ ಮಾಡಬೇಕು. ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವ ಗ್ರಾಮದಲ್ಲಿ ಶುದ್ದ ನೀರಿನ ಘಟಕಗಳು ಹಾಗೂ ಹೈ ಮಾಸ್ಕ್ ಲೈಟ್ ಗಳು ಇಲ್ಲವೋ ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತಿ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ. ಮೈತ್ರಿ ಮಾತನಾಡಿ, ಶಾಲೆಗಳಲ್ಲಿ ಶೌಚಾಲಯ ನೀರು ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ವಕ್ಕಲೇರಿ ಹೋಬಳಿಯ ತ್ಯಾವನಹಳ್ಳಿ ಪ್ರೌಢಶಾಲೆಯ ಕಾಂಪೌAಡ್ ಕಾಮಗಾರಿಯ ಸಂಬAಧ ದಾಖಲೆ ಕೊಡಿ ಸರ್ವೇ ಮಾಡೋಣ ಈ ಶಾಲೆಗೆ ನಾನು ಭೇಟಿ ಕೊಡುತ್ತೇನೆ ಹಿಂದುಳಿದ ಹಾಸ್ಟೆಲ್ ಗಳಲ್ಲಿ ಬುಕ್ ಕಾರ್ನರ್ ಇರಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪೂರಕವಾಗಿರಬೇಕು. ರೇಷ್ಮೆಯಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನದಲ್ಲಿ ಬರುವಂತೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಪಂ ಇಒ ಮುನಿಯಪ್ಪ, ಕೃಷಿ ಸಹಾಯಕ ನಿರ್ದೇಶಕ ಮಹೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುಬ್ರಮಣಿ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಚಿತ್ರ ೩೦ ಕೆ.ಎಲ್.ಆರ್. ೧೦ : ಶಾಸಕ ಕೊತ್ತೂರು ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆ, ಎಂ.ಎಲ್.ಸಿ. ಅನಿಲ್ ಕುಮಾರ್, ಎ.ಸಿ. ಡಾ.ಮೈತ್ರಿ, ಇ.ಓ. ಮುನಿಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net