ಕ್ಷೇತ್ರದ ಎಲ್ಲೆಡೆ ಸಮಾನ ಅಭಿವೃದ್ಧಿಗೆ ಯೋಜನೆ - ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

`
Published on

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಎಲ್ಲೆಡೆ ಸಮಾನವಾಗಿ ಅಭಿವೃದ್ಧಿ ಕಾರ್ಯಗಳಾ ಗಬೇಕು. ಆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಮೋದಗಾ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ಗಂಗಣ್ಣ ಕಲ್ಲೂರ, ಬಸವರಾಜ ಮ್ಯಾಗೋಟಿ, ಗ್ರಾಪಂ ಮಾಜಿ ಸದಸ್ಯೆ ಉಷಾತಾಯಿ ಪಾಟೀಲ, ಮುಖಂಡರಾದ ಓಮಣ್ಣ ಅಸ್ಟೇಕರ, ಭರಮಾ ಕಟಬುಗೋಳ, ಬಸವಣ್ಣಿ ಮುಗಳಿ, ಪರಶುರಾಮ ರಾಮಣೆ, ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಾದೇವ ತಳವಾರ ಹಾಗೂ ಗ್ರಾಪಂ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net