ಖಾಲಿ ಇರುವ ಅಂಗನವಾಡಿ ಮತ್ತು ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

Published on

ವಿಜಯವಾಣಿ ಸುದ್ದಿಜಾಲ ಕೋಲಾರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಆರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ೧೨೦ ಅಂಗನವಾಡಿ ಕಾರ್ಯಕರ್ತೆಯರ ಮತ್ತು ೩೯೩ ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆನ್‌ಲೈನ್ https//karnemakaone.kar.nic.in/abcd/ಚಿbಛಿಜ/ ಮೂಲಕ ಏಪ್ರಿಲ್ ೧೯ ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಆದರೆ ಕಾರಣಾಂತರಗಳಿAದ ಅಂತಿಮ ದಿನಾಂಕ ಮೇ ೨೦ರ ವರೆಗೆ ಮಾನ್ಯ ಜಿಲ್ಲಾಧಿಕಾರಿಗಳವರ ಮೌಖಿಕ ಆದೇಶದಂತೆ ವಿಸ್ತರಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆAದು ಇಲಾಖೆಯ ಉಪ ನಿರ್ದೇಶಕರಾದ ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net