ಖಾಸಗಿ ಆರೋಗ್ಯ ಸಂಸ್ಥೆಗಳು ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು / ಡಾ. ಶಂಕರ್ ವಣಿಕ್ಯಾಳ್

Published on

ಖಾಸಗಿ ಆರೋಗ್ಯ ಸಂಸ್ಥೆಗಳು ಬಡವರ ಹಾಗೂ ನಿರ್ಗತಿಕರ ಪರವಾಗಿ ಮಾನವೀಯತೆ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಾಳ್ ಅವರು ಖಾಸಗಿ ಆರೋಗ್ಯ ಸಂಸ್ಥೆಗಳ ಮುಖ್ಯಸ್ಥರಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಪರಿಶೀಲನೆ ಹಾಗೂ ಕುಂದು ಕೊರತೆಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ೮೦ ಆಸ್ಪತ್ರೆ ಗಳಲ್ಲಿ ಅಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ೧೩ ಲಕ್ಷಕ್ಕೂ ಅಧಿಕ ಬಿ.ಪಿ.ಎಲ್ ಕಾರ್ಡುದಾರರಿದ್ದು, ಕೇವಲ ಶೇ.೨೬.೯ ರಷ್ಟು ಮಾತ್ರ ಅಯುಷ್ಮಾನ್ ಭಾರತ್ ಕಾರ್ಡ್ಗಳನ್ನು ವಿತರಿಸಲಾಗಿದೆ. ಕೋಲಾರವು ರಾಜ್ಯದಲ್ಲಿ ೨೫ ನೇ ಸ್ಥಾನದಲ್ಲಿದೆ. ಪ್ರತಿ ಗ್ರಾಮದಲ್ಲಿ ಯೋಜನೆಯ ಬಗ್ಗೆ ಅರಿವು ಮೂಡಿಸಿ ಗ್ರಾಮ ಒನ್‌ಗಳಲ್ಲಿ ಅಭಿಯಾನದಂತೆ ನೋಂದಣಿ ಮಾಡಿಸಿ ಎಂದು ಸೂಚಿಸಿದರು.

ಸರ್ಕಾರವು ಜಿಲ್ಲಾದ್ಯಂತ ಪ್ರತಿನಿತ್ಯ ೫೦೦೦ ಕಾರ್ಡ್ಗಳನ್ನು ನೋಂದಾಯಿಸಲು ಗುರಿ ನೀಡಿದ್ದಾಗ್ಯೂ ನಿಗಧಿತ ಗುರಿ ತಲುಪಲು ಸಾಧ್ಯವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ತಾಲ್ಲೂಕು ಆರೋಗ್ಯಾಧಿಕಾರಿಗಳು ಆಸಕ್ತಿ ವಹಿಸಿ ಗುರಿ ಸಾಧನೆ ಮಾಡಿಸಬೇಕು. ಪ್ರತಿನಿತ್ಯ ಕನಿಷ್ಠ ೧೦೦ ಕಾರ್ಡ್ಗಳನ್ನು ಪ್ರತಿ ತಾಲ್ಲೂಕಿನಲ್ಲಿ ನೋಂದಣಿ ಮಾಡಿಸಿದರೆ ಗುರಿ ತಲುಪುವಲ್ಲಿ ಯಶಸ್ವಿಯಾಗುತ್ತೇವೆ. ಎಲ್ಲದಕ್ಕೂ ಮನೋಬಲ ಮುಖ್ಯ ಎಂದರು.

ತಾAತ್ರಿಕ ಸಮಸ್ಯೆಗಳು ಎದುರಾದಾಗ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿ ತಾಂತ್ರಿಕ ನೆರವನ್ನು ಪಡೆಯಬೇಕು. ಅಗತ್ಯವಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಇಲಾಖೆಗಳ ಸಹಕಾರ ಪಡೆದುಕೊಂಡು ಸಾರ್ವಜನಿಕರನ್ನು ತಲುಪಬೇಕು. ಒಟ್ಟಾರೆಯಾಗಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು. ನಂತರ ಕುಂದುಕೊರತೆಗಳನ್ನು ಆಲಿಸಿ ಇನ್ನು ಮುಂದೆ ಪ್ರತಿ ಮಾಹೆ ಕುಂದುಕೊರತೆ ಸಭೆಗಳನ್ನು ಏರ್ಪಡಿಸುವಂತೆ ತಿಳಿಸಿದರು.

ಖಾಸಗಿ ಆರೋಗ್ಯ ಸಂಸ್ಥೆಯೊAದು ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ನೀಗಧಿತ ದರಕ್ಕಿಂತ ಹೆಚ್ಚಿಗೆ ವಸೂಲು ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ ಅವರು ಹೆಚ್ಚುವರಿಯಾಗಿ ಪಡೆದಿರುವ ಮೊತ್ತವನ್ನು ಕೂಡಲೇ ಹಿಂತಿರುಗಿಸುವAತೆ ಸೂಚಿಸಿದರು.

ಮತ್ತೊಂದು ಖಾಸಗಿ ಆರೋಗ್ಯ ಸಂಸ್ಥೆಯು ಎ.ಪಿ.ಎಲ್ ಕಾರ್ಡುದಾರರಿಗೆ ಚಿಕಿತ್ಸೆಗೆ ಅನುಮತಿಸುತ್ತಿಲ್ಲವೆಂದು ದೂರು ಬಂದಿದ್ದು, ಎಂ.ಓ.ಯು ನಲ್ಲಿ ಸರ್ಕಾರವು ಎಪಿಎಲ್ ಕಾರ್ಡುದಾರರಿಗೂ ಚಿಕಿತ್ಸೆಗೆ ಅನುಮತಿಸಿದ್ದು, ಅವರುಗಳಿಗೂ ನಿಯಮಾವಳಿಗಳನ್ವಯ ಸೂಕ್ತ ಚಿಕಿತ್ಸೆ ನೀಡುವಂತೆ ತಾಕಿತು ಮಾಡಿದರು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಜಿಲ್ಲಾ ನೋಡಲ್ ಅಧಿಕಾರಿ ಎನ್.ಸಿ. ನಾರಾಯಣ ಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ, ಕೆಜಿಎಫ್ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರವಿಕುಮಾರ್, ಎಬಿಆರ್‌ಕೆ ಜಿಲ್ಲಾ ಸಂಯೋಜಕಿ ಡಾ. ವಸುಂಧರಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆಯ ಪ್ರಮುಖ ಖಾಸಗಿ ಆರೋಗ್ಯ ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ಆರೋಗ್ಯ ಮಿತ್ರರು ಉಪಸ್ಥಿತರಿದ್ದರು.

ಚಿತ್ರ ೦೬ ಕೆ.ಎಲ್.ಆರ್. ೦೫ : ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಪರಿಶೀಲನೆ ಹಾಗೂ ಕುಂದು ಕೊರತೆಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಂಕರ್ ವಣಿಕ್ಯಾಳ್, ಜಿಲ್ಲಾ ನೋಡಲ್ ಅಧಿಕಾರಿ ಎನ್.ಸಿ. ನಾರಾಯಣಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net