ಗಂಧನಹಳ್ಳಿಯಲ್ಲಿ ಹೆಚ್ಚುವರಿ ಮತಗಟ್ಟೆ ಕೇಂದ್ರ ತೆರೆಯಿರಿ

29 KRN-1
ಕೆ.ಆರ್.ನಗರದಲ್ಲಿ ಎಂ.ಬಸವರಾಜು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜಿ.ಎಸ್.ವೆಂಕಟೇಶ್ ನೇತೃತ್ವದಲ್ಲಿ ಪದಾಧಿಕಾರಿಗಳು ತಹಸೀಲ್ದಾರ್ ಎಂ.ಜಿ.ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಜಿ.ಎಸ್.ವೆಂಕಟೇಶ್, ಜಿ.ಎಂ.ಹೇಮಂತ್, ವಸಂತಕುಮಾರ್, ಕೆಂಪರಾಜು, ಜಿ.ಎಸ್. ಮಂಜುನಾಥ್, ಉಮೇಶ್, ತ್ಯಾಗರಾಜು. ಲೋಕೇಶ್, ಯಶವಂತ್ ಇದ್ದರು.
Published on

ಕೆ.ಆರ್.ನಗರ: ಚುನಾವಣಾ ಸಂದರ್ಭದಲ್ಲಿ ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಹೆಚ್ಚುವರಿ ಮತಗಟ್ಟೆ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ಎಂ.ಬಸವರಾಜು ಚಾರಿಟಬಲ್ ಟ್ರಸ್ಟ್ ವತಿಯಿಂದ ಬುಧವಾರ ತಹಸೀಲ್ದಾರ್ ಎಂ.ಜಿ.ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಗಂಧನಹಳ್ಳಿ ಗ್ರಾಮದಲ್ಲಿ ಐದು ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಯಲ್ಲೂ ಒಂದು ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಇದರಿಂದಾಗಿ ಪ್ರತಿ ಚುನಾವಣೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ವೇಳೆಗೆ ಮತ್ತಷ್ಟು ಯುವ ಮತದಾರರು ಸೇರ್ಪಡೆ ಆಗಲಿದ್ದಾರೆ. ಇದರಿಂದ ಮತ್ತಷ್ಟು ಮತಗಳ ಸಂಖ್ಯೆ ಹೆಚ್ಚಳವಾಗಲಿದ್ದು, ಮತ್ತೆ ಸಮಸ್ಯೆ ಉದ್ಭವವಾಗಲಿದೆ. ಆದ್ದರಿಂದ ಹೆಚ್ಚುವರಿ ಮತಗಟ್ಟೆ ತೆರೆಯಬೇಕು ಎಂದು ಮನವಿ ಮಾಡಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಎಂ.ಜಿ.ಸಂತೋಷ್‌ಕುಮಾರ್, ಈ ಸಂಬಂಧ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿ ಅಗತ್ಯವಿದ್ದರೆ ಮತದಾರರಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ ಮತಗಟ್ಟೆ ಸ್ಥಾಪಿಸುವುದಾಗಿ ಭರವಸೆ ನೀಡಿದರು.

ಟ್ರಸ್ಟ್ ಅಧ್ಯಕ್ಷ ಜಿ.ಎಸ್.ವೆಂಕಟೇಶ್, ಪದಾಧಿಕಾರಿಗಳಾದ ಜಿ.ಎಂ. ಹೇಮಂತ್, ವಸಂತಕುಮಾರ್, ಕೆಂಪರಾಜು, ಜಿ.ಎಸ್. ಮಂಜುನಾಥ್, ಉಮೇಶ್, ತ್ಯಾಗರಾಜು. ಲೋಕೇಶ್, ಯಶವಂತ್ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net